LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ದಲ್ಲಿ ನಡೆದ ಕೊಲೆ ಪ್ರಕರಣ ಪೊಲೀಸರಿಗೆ ಶರಣಾದ ಕೊಲೆ ಆರೋಪಿ ಪ್ರಕಾಶ

ಧಾರವಾಡ -

ಧಾರವಾಡ ನಗರದ ಡಿಪೋ ವೃತ್ತದಲ್ಲಿ ನಿನ್ನೆ ನಡೆದ ಕೊಲೆ ಪ್ರಕರಣದಲ್ಲಿ ಕೊಲೆ ಮಾಡಿದ ಆರೋಪಿ ಪೊಲೀಸರಿಗೆ ಶರಣಾಗಿದ್ದಾರೆ‌. ಮನೆಯೊಂದರಲ್ಲಿ ನಡೆದ ಜಗಳದಲ್ಲಿ ಆಕಾಶ್ ಕೊಟೂರ ಅವನನ್ನು ಅವರ ಚಿಕ್ಕಪ್ಪ ಪ್ರಕಾಶ್ ಕೊಟಿಉರ ಕೊಲೆ ಮಾಡಿದ್ದರು.

ಕೊಲೆಯಾದ ಆಕಾಶ್

ಆಕಾಶ ಕೋಟೂರ (26) ಕೊಲೆಯಾದ ಯುವಕ ನಾಗಿದ್ದನು. ಯುವಕನ ಚಿಕ್ಕಪ್ಪ ಪ್ರಕಾಶ ಕೋಟೂರ ಎಂಬಾತ ಕೊಲೆ ಮಾಡಿದ್ದನು. ಆಕಾಶ ಆಗಾಗ ಮನೆಯಲ್ಲಿ ಮದ್ಯ ಸೇವನೆ ಮಾಡಿ ಬಂದು ಕಿರಿಕಿರಿ ಮಾಡುತ್ತಿದ್ದ. ಅದೇ ರೀತಿ ಭಾನುವಾರವೂ ಮದ್ಯ ಸೇವನೆ ಮಾಡಿ ಬಂದು ಮನೆಯಲ್ಲಿ ಜಗಳ ಮಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ಪ್ರಕಾಶ, ಆಕಾಶ ತಲೆಗೆ ಕಬ್ಬಿಣದ ಸಲಾಕೆಯಿಂದ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಆಕಾಶ ಸ್ಥಳದಲ್ಲೇ ಮೃತಪಟ್ಟಿದ್ದನು.

ಘಟನೆ ಮಾಹಿತಿ ತಿಳಿದ ಉಪನಗರ ಇನ್ಸ್ಪೆಕ್ಟರ್ ಪ್ರಮೋದ ಯಲಿಗಾರ,ಪಿಎಸ್ಐ ಶ್ರೀಮಂತ ಹುಣಸಿಕಟ್ಟಿ ಮತ್ತು ಅಪರಾಧ ವಿಭಾಗದ ಪೊಲೀಸ್ ಸಿಬ್ಬಂದಿ ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ತಡರಾತ್ರಿವರೆಗೂ ಆರೋಪಿ ಹುಡುಕಾಡಿ. ಮುರುಘಾಮಠದಲ್ಲಿ ಮಲಗಿದ್ದ ಆರೋಪಿ ಬೆಳಗಿನ ಜಾವ ತಾನೇ ಬಂದು ಶರಣಾಗಿದ್ದಾರೆ‌.

ಕೊಲೆ ಆರೋಪಿ ಪ್ರಕಾಶ್

ಸಧ್ಯ ಆರೋಪಿ ಉಪನಗರ ಪೊಲೀಸ್ ಠಾಣೆಯಲ್ಲಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....