LIVE TV LocalCrimeNationalInternationalPoliticsEducationTechnologyEntertainmentSportsFeature
International News

ಬಹುಮತ ಸಾಬೀತು ವಿಫಲ - ನಾರಾಯಣಸ್ವಾಮಿ ಸರ್ಕಾರ ಪತನ

ಪುದುಚೇರಿ -

ನಾರಾಯಣಸ್ವಾಮಿ ನೇತೃತ್ವದ ಪುದುಚೇರಿ ಕಾಂಗ್ರೆಸ್‌ ಸರ್ಕಾರ ಪತನವಾಗಿದೆ. ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ಬಹುಮತ ಸಾಬೀತು ಪಡಿಸಲು ವಿಫಲಗೊಂಡಿದೆ. ಸೋಮವಾರ ಬೆಳಗ್ಗೆ ಬಹುಮತ ಸಾಬೀತು ಪಡಿಸಲು ಸರ್ಕಾರ ವಿಫಲಗೊಂಡ ಹಿನ್ನೆಲೆಯಲ್ಲಿ ನಾರಾಯಣ ಸ್ವಾಮಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ನಾರಾಯಣ ಸ್ವಾಮಿ ಸರ್ಕಾರ ಬಹುಮತ ಸಾಬೀತು ಪಡಿಸಲು ವಿಫಲವಾದ ಕೂಡಲೇ ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರದ ಸದಸ್ಯರು ಸದನದಿಂದ ಹೊರನಡೆದಿದ್ದಾರೆ. ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ಬಹುಮತ ಸಾಬೀತುಪಡಿಸಲು ವಿಫಲವಾಗಿದೆ ಎಂದು ಸ್ಪೀಕರ್ ವಿ.ಪಿ.ಶಿವಕೋಲುಂಧು ಘೋಷಿಸಿದ್ದಾರೆ.

ಬಹುಮತ ಸಾಬೀತುಪಡಿಸುವ ಸಂದಿಗ್ಧ ಪರಿಸ್ಥಿತಿಯಲ್ಲಿರುವ ನಾರಾಯಣಸ್ವಾಮಿ ಅವರಿಗೆ ಕಾಂಗ್ರೆಸ್‌-ಡಿಎಂಕೆ ಮೈತ್ರಿಕೂಟದ ಇಬ್ಬರು ಶಾಸಕರು ಭಾನುವಾರ ರಾಜೀನಾಮೆ ನೀಡಿದ್ದು ನುಂಗಲಾಗದ ತುತ್ತಾಗಿ ಪರಿಣಮಿಸಿತ್ತು. ಹೀಗಾಗಿ ಸರ್ಕಾರ ಉಳಿಸಿಕೊಳ್ಳುವ ಸವಾಲು ಮತ್ತಷ್ಟು ಪ್ರಯಾಸವಾಗಿತ್ತು. ಕಾಂಗ್ರೆಸ್‌ನ ಕೆ. ಲಕ್ಷ್ಮೀನಾರಾ ಯಣನ್‌ ಮತ್ತು ಡಿಎಂಕೆಗೆ ಸೇರಿದ ವೆಂಕಟೇಶನ್‌ ರಾಜೀನಾಮೆ ನೀಡಿರುವ ಶಾಸಕರು.

ಈ ಇಬ್ಬರ ರಾಜೀನಾಮೆಯಿಂದಾಗಿ, 33 ಸದಸ್ಯರನ್ನೊಳಗೊಂಡ ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್‌-ಡಿಎಂಕೆ ಮೈತ್ರಿಕೂಟದ ಶಾಸಕರ ಸಂಖ್ಯೆ 11ಕ್ಕೆ ಕುಸಿದಿದೆ. ಆದರೆ, ವಿರೋಧ ಪಕ್ಷ 14 ಶಾಸಕರನ್ನು ಹೊಂದಿದೆ.ಏಳು ಸ್ಥಾನಗಳು ಖಾಲಿ ಉಳಿದಿವೆ. ಮಾಜಿ ಸಚಿವರಾದ ಎ.ನಮಶಿವಾಯಂ ಮತ್ತು ಮಲ್ಲಾಡಿ ಕೃಷ್ಣರಾವ್‌ ಸೇರಿದಂತೆ ನಾಲ್ವರು ಕಾಂಗ್ರೆಸ್‌ ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದಾರೆ. ನಮಶಿವಯಂ ಈಗಾಗಲೇ ಬಿಜೆಪಿ ಸೇರಿದ್ದಾರೆ. ಮತ್ತೊಬ್ಬ ಶಾಸಕರನ್ನು ಈ ಮೊದಲೇ ಅನರ್ಹಗೊಳಿಸಲಾಗಿತ್ತು.ಒಟ್ಟಾರೆ ಪುದುಚೇರಿ ಸರ್ಕಾರ ಪತನವಾಗಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....