LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹೊಸ ವರ್ಷಾಚರಣೆ - ಡಿಜೆ ನೃತ್ಯ, ಪಾರ್ಟಿ ನಿಷೇಧ – ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು -

ಎಲ್ಲರೂ ನಿರೀಕ್ಷೆ ಮಾಡುತ್ತಿದ್ದ ಹೊಸ ವರ್ಷಾಚರಣೆ ಕುರಿತಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟ ಮಾಡಿದೆ. ಕೋವಿಡ್ ಕಾರಣ ಇದೇ ಡಿಸೆಂಬರ್ 30 ರಿಂದ 2021ರ ಜನೇವರಿ.2 ರವರಗೆ ಕ್ಲಬ್, ಪಬ್, ರೆಸ್ಟೋರೆಂಟ್ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಡಿಜೆ ನೃತ್ಯ, ವಿಶೇಷ ಪಾರ್ಟಿ ಸೇರಿದಂತೆ ಒಂದೆಡೆ ಜನ ಸೇರುವ ವಿವಿಧ ಕಾರ್ಯಕ್ರಮಗಳನ್ನು ಸರ್ಕಾರವು ನಿಷೇಧಿಸಿದೆ.ಕ್ರಿಸ್‌ಮಸ್ ಹಬ್ಬ ಹಾಗೂ ಹೊಸ ವರ್ಷ ಆಚರಣೆಯ ಕಾರಣ ಸರ್ಕಾರವು ಕೆಲ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ರಾಜ್ಯದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ, ಹೆಚ್ಚು ಜನ ಸೇರುವ ವಸತಿ ಸಮುಚ್ಛಯಗಳಲ್ಲಿ ಹಾಗೂ ಜನ ಸೇರುವ ಸ್ಥಳಗಳಲ್ಲಿ ಸಾಮೂಹಿಕ ಕೂಟಗಳನ್ನು ನಿಷೇಧಿಸಿ, ಆದೇಶ ಹೊರಡಿಸಿದೆ. ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದ್ದು, ಕೋವಿಡ್ ಹರಡುವಿಕೆ ತಡೆಯುವ ಸಂಬಂಧ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳವಾಗಿ ಮತ್ತು ಅರ್ಥಗರ್ಭಿತವಾಗಿ ಆಚರಿಸುವಂತೆ ಸರ್ಕಾರವು ಆದೇಶದಲ್ಲಿ ತಿಳಿಸಿದೆ. ಚರ್ಚ್‌ಗಳಲ್ಲಿ ಹೆಚ್ಚು ಜನರು ಗುಂಪು ಸೇರದಂತೆ ಹಾಗೂ ಅಂತರ ಕಾಯ್ದುಕೊಳ್ಳುವಂತೆ ಮೇಲ್ವಿಚಾರಕರು ಮತ್ತು ಆಯೋಜಕರು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ.

ಹೊಸ ವರ್ಷದ ಸಂದರ್ಭದಲ್ಲಿ ಕ್ಲಬ್‌, ಪಬ್, ರೆಸ್ಟೋರೆಂಟ್‌ಗಳು ಸಾಮಾನ್ಯ ದಿನಗಳಂತೆ ವ್ಯವಹಾರ ನಡೆಸಲು ಅವಕಾಶವಿದೆ. ಮದ್ಯ ಮಾರಾಟದ ಮೇಲೆ ನಿರ್ಬಂಧವಿಲ್ಲ. ಆದರೆ, ವಿಶೇಷ ಪಾರ್ಟಿ ಹಾಗೂ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಜನರು ಒಂದೆಡೆ ಸೇರುವ ಹಾಗಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಿ ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಹಾಕಿ ಸಾರ್ವಜನಿಕರಿಗೆ ಪ್ರಕಟ ಮಾಡಿದೆ. ಇದರಂತೆ ಎಲ್ಲರೂ ಸಧ್ಯ ಬರುತ್ತಿರುವ ಹೊಸ ವರ್ಷದ ಆಚರಣೆಯನ್ನು ಮತ್ತು ಕ್ರೀಸ್ ಮಸ್ ಆಚರಣೆಯನ್ನು ಮಾಡಬೇಕೆಂದು ಮಾರ್ಗಸೂಚಿ ಸೂಚನೆಗಳನ್ನು ಹೇಳಿ ಪ್ರಕಟ ಮಾಡಿ ಆದೇಶವನ್ನು ಹೊರಡಿಸಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....