LIVE TV LocalCrimeNationalInternationalPoliticsEducationTechnologyEntertainmentSportsFeature
State News

ಒಂದೆಡೆ ತೀವ್ರಗೊಂಡ ತನಿಖೆ ಮತ್ತೊಂದೆಡೆ ಸೆಕ್ಸ್ ಸಿಡಿ ವಿಚಾರ ಕೊನೆಗೂ ದಾಖಲಾಯಿತು ದೂರು

ಬೆಂಗಳೂರು -

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ವಿಚಾರ ಕುರಿತು ಕೊನೆಗೂ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಮಾಜಿ ಶಾಸಕ ಎಂ.ವಿ. ನಾಗರಾಜ್ ಸದಾಶಿವನಗರ ಪೊಲೀಸರಿಗೆ ದೂರನ್ನು ನೀಡಿದ್ದಾರೆ. ಅಪರಿಚಿತರ ವಿರುದ್ಧ ನೀಡಿರುವ ದೂರನ್ನು ಸದಾಶಿವನಗರ ಪೊಲೀಸರು ಸ್ವೀಕರಿಸಿ ದ್ದಾರೆ. ದೂರನ್ನು ಆಧರಿಸಿ ಎಫ್‌ಐಆರ್ ದಾಖಲಿಸಿದ್ದು ಈ ಮೂಲಕ ಸಿಡಿ ಸ್ಫೋಟದ ಎಸ್‌ಐಟಿ ತನಿಖೆಗೆ ಎದುರಾಗಿದ್ದ ತೊಡಕು ದೂರವಾಗಿದೆ.

ರಮೇಶ್ ಜಾರಕಿಹೊಳಿ ಬಗ್ಗೆ ಸಂಚು ರೂಪಿಸಿ ನಕಲಿ ಸಿಡಿ ತಯಾರಿಸಲಾಗಿದೆ. ಜಾರಕಿಹೊಳಿಯನ್ನು ರಾಜಕೀಯವಾಗಿ ಮುಗಿಸಲು ಈ ಷಡ್ಯಂತ್ರ ನಡೆದಿದೆ. ಇದರ ಹಿಂದೆ ಅನೇಕರ ಕೈವಾಡವಿದೆ. ಸಿಡಿ ಸ್ಫೋಟ ಕುರಿತು ಸಮಗ್ರ ತನಿಖೆ ಮಾಡಬೇಕು. ನಕಲಿ ಸಿಡಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಉಲ್ಲೇಖ ಮಾಡಲಾಗಿದೆ.

ನಕಲಿ ಸಿಡಿ ಎಂದು ಭಾವಿಸಿ ಮೊದಲು ದೂರು ನೀಡಿರಲಿಲ್ಲ ಎಂದು ಉಲ್ಲೇಖಿಸಿ ಅಪರಿಚಿತರ ವಿರುದ್ಧ ದೂರು ನೀಡಲಾಗಿದೆ. ಜಾರಕಿಹೊಳಿ ಪರಮಾಪ್ತ ಹಾಗೂ ಮಾಜಿ ಶಾಸಕ ನಾಗರಾಜ್ ನೀಡಿರುವ ದೂರನ್ನು ಪರಿಗಣಿಸಿ ಸದಾಶಿವನಗರ ಪೊಲೀಸರು ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ಅವರಿಗೆ ಮಾಹಿತಿ ನೀಡಿದ್ದಾರೆ. ಇದೀಗ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸಿಡಿ ಸ್ಪೋಟ ಪ್ರಕರಣ ಸಂಬಂಧ ಈಗಾಗಲೇ ವಿಶೇಷ ತನಿಖಾ ತಂಡ ಆರು ಮಂದಿಯನ್ನು ವಶಕ್ಕೆ ಪಡೆದಿದೆ. ಬೀದರ್ ನ ಬಾಲ್ಕಿಯಲ್ಲಿ ಕಾನೂನು ವಿದ್ಯಾರ್ಥಿ ಸೇರಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಯುವಕರು ಮಿಸ್ಸಿಂಗ್ ಆಗಿದ್ದಾರೆ ಎಂದು ಆರೋಪಿಸಿ ವಿಶೇಷ ತನಿಖಾ ತಂಡದ ವಿರುದ್ಧವೇ ಎಫ್‌ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ಬಾಲ್ಕಿಯಲ್ಲಿ ವಶಕ್ಕೆ ಪಡೆದಿದ್ದ ಇಬ್ಬರು ಯುವಕರ ನ್ನು ಕಾನೂನು ಬದ್ಧಗೊಳಿಸುವ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಇನ್ನು ಈಗಾಗಲೇ ವಶಕ್ಕೆ ಪಡೆದಿದ್ದ ಆರು ಮಂದಿಯ ಪೈಕಿ ಅಗತ್ಯ ಇರುವರನ್ನು ಬಂಧಿಸುವ ಸಾಧ್ಯತೆ ಯಿದೆ. ಅಂತೂ ವಿಶೇಷ ತನಿಖಾ ತಂಡದ ತನಿಖೆಗೆ ಅಡ್ಡಿಯಾಗಿದ್ದ ತೊಡಕು ದೂರವಾಗಿದೆ.ಒಂದು ಕಡೆ ಕೊನೆಗೂ ದೂರು ದಾಖಲಾದರೆ ಮತ್ತೊಂದು ಕಡೆ ತನಿಖೆ ತೀವ್ರಗೊಂಡಿದ್ದು ಇನ್ನೂ ಏನೇನೂ ಬೆಳವಣಿಗೆ ಆಗುತ್ತದೆ ಕಾದು ನೋಡಬೇಕು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....