LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅಕ್ರಮ ಬಡಾವಣೆಗಳ ತೆರುವು - ಬೆಳ್ಳಂ ಬೆಳಿಗ್ಗೆ ಜೆಸಿಬಿ ಸದ್ದು

ಧಾರವಾಡ

ನಗರದ ಹೊಸಯಲ್ಲಾಪುರ ಹಾಗೂ ಚರಂತಿಮಠ ಗಾರ್ಡನ್ ಸುತ್ತ ಮುತ್ತಲು ಅನಧಿಕೃತವಾಗಿ ನಿರ್ಮಾಣಗೊಂಡಿದ್ದ ಬಡಾವಣೆಗಳನ್ನು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ (ಹುಡಾ) ಸಿಬ್ಬಂದಿ ಬುಧವಾರ ತೆರವುಗೊಳಿಸಿದರು.

ಹುಡಾ ಅಧಿಕಾರಿಗಳು ಅವಳಿ ನಗರದಲ್ಲಿ 120ಕ್ಕೂ ಅಧಿಕ ಅಕ್ರಮ ಬಡಾವಣೆಗಳನ್ನು ಗುರುತಿಸಿದ್ದು, ಆ ಪೈಕಿ 21 ಬಡಾವಣೆಗಳಲ್ಲಿ ಹಾಕಲಾಗಿದ್ದ ವಿದ್ಯುತ್ ಕಂಬ, ಗುರುತಿನ ಕಲ್ಲುಗಳನ್ನು ತೆರವುಗೊಳಿಸಿದರು. ಬಿಗಿ ಪೊಲೀಸ್ ಬಂದೋಬಸ್ತ್ ಇದ್ದರೂ ಬಡಾವಣೆ ಮಾಲೀಕರು ಹಾಗೂ ಅಲ್ಲಿ ನಿವೇಶನಗಳನ್ನು ಖರೀದಿಸಿದವರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಇದೇ ವೇಳೆ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ ಮಾತನಾಡಿ, ಒಂದೇ ನಿವೇಶನವನ್ನು ಹಲವರಿಗೆ ಮಾರುವ ಎಲ್ಲ ಸಾಧ್ಯತೆಗಳು ಇರುವುದರಿಂದ ಅಕ್ರಮ ಬಡಾವಣೆಗಳ ತೆರವು ಕಾರ್ಯಾಚರಣೆ ಅನಿವಾರ್ಯವಾಗಿತ್ತು.

ಈ ನಿವೇಶನಗಳಿಗೆ ಕಾನೂನಿನಡಿ ಯಾವುದೇ ರಕ್ಷಣೆ ಇರುವುದಿಲ್ಲ. ಹೀಗಾಗಿ ಅಕ್ರಮ ಬಡಾವಣೆಗಳನ್ನು ತಡೆದರೆ ಅಮಾಯಕರಿಗೆ ಅನುಕೂಲವಾಗುತ್ತದೆ. ಅದ್ದರಿಂದ ಇನ್ನು ಮುಂದೆ ಬಡಾವಣೆಗಳನ್ನು ಮಾಡುವವರು ಕೃಷಿಯೇತರ (ಎನ್‌ಎ) ಮಾಡಿಸಿ ನಂತರವೇ ಮಾರಾಟ ಮಾಡಲಿ' ಎಂದು ಹೇಳಿದರು. ಇನ್ನೂ ಈ ಒಂದು ಕಾರ್ಯಾಚರಣೆಯಲ್ಲಿ ಇಲಾಖೆಯ ಅಧಿಕಾರಿಗಳು, ಅಧ್ಯಕ್ಷ ನಾಗೇಶ ಕಲಬುರಗಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....