LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬ್ಯಾಂಕ್ ಮುಷ್ಕರ ಮುಂದೂಡಿಕೆ.....ಎಂದಿನಂತೆ ಬ್ಯಾಂಕ್ ಸೇವೆಗಳು.....

ಬೆಂಗಳೂರು -

ಬ್ಯಾಂಕ್ ಮುಷ್ಕರ ಮುಂದೂಡಿಕೆ ಎಂದಿನಂತೆ ಸೇವೆಗಳು ಲಭ್ಯ ಹೌದು ದೇಶಾದ್ಯಂತ ಇಂದಿನಿಂದ ಸೆಪ್ಟೆಂಬರ್ 30 ರವರೆಗೆ ಕರೆ ನೀಡಲಾಗಿದ್ದ ಮೂರು ದಿನಗಳ ಸುದೀರ್ಘ ಬ್ಯಾಂಕ್ ನೌಕರರ ಮುಷ್ಕರವನ್ನು ದಿಢೀರ್ ಮುಂದೂಡಲಾಗಿದೆ. ಯುನೈಟೆಡ್ ಫಾರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಹಾಗೂ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ನಡುವೆ ನಡೆದ ಸುದೀರ್ಘ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.ಇದರಿಂದಾಗಿ ಹೊಸ ವಾರದ ಆರಂಭದಲ್ಲೇ ಬ್ಯಾಂಕಿಂಗ್ ಸೇವೆಗಳಲ್ಲಿ ಏರುಪೇರಾಗಬಹುದು ಎಂದು ಆತಂಕಗೊಂಡಿದ್ದ ಸಾರ್ವಜನಿಕರು ಹಾಗೂ ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಒಕ್ಕೂಟಗಳು ಈ ಮುಷ್ಕರಕ್ಕೆ ಕರೆ ನೀಡಿದ್ದವು ಉನ್ನತ ಮಟ್ಟದ ಸಂಧಾನ ಸಭೆಯಲ್ಲಿ ಬ್ಯಾಂಕ್ ನೌಕರರ ಪ್ರಮುಖ ಬೇಡಿಕೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು ಮುಖ್ಯವಾಗಿ ವಾರದ ಎಲ್ಲಾ ಶನಿವಾರಗಳನ್ನು ಅಧಿಕೃತ ರಜಾದಿನಗಳನ್ನಾಗಿ ಘೋಷಿಸಬೇಕು (5-Days Banking) ಎಂಬ ಬೇಡಿಕೆ ಸೇರಿದಂತೆ ನೌಕರರ ವಿವಿಧ ಪ್ರಮುಖ ಹಕ್ಕುಗಳ ಬಗ್ಗೆ ಸಭೆಯಲ್ಲಿ ಧನಾತ್ಮಕ ಚರ್ಚೆಗಳು ನಡೆದಿವೆ.

ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ IBA ಮತ್ತು UFBU ಪ್ರತಿನಿಧಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲು ಸಭೆಯಲ್ಲಿ ನಿರ್ಧರಿ ಸಲಾಗಿದೆ ಆಡಳಿತ ಮಂಡಳಿಯಿಂದ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿರುವ ಹಾಗೂ ಸಮಸ್ಯೆಯ ಶಮನಕ್ಕೆ ಸಮಿತಿ ರಚನೆಯಾಗಿರುವ ಹಿನ್ನೆಲೆಯಲ್ಲಿ, ಸದ್ಯಕ್ಕೆ ಮುಷ್ಕರವನ್ನು ಹಿಂಪಡೆಯಲು ಬ್ಯಾಂಕ್ ಸಂಘಟನೆಗಳು ಒಪ್ಪಿಕೊಂಡಿದ್ದು, ಇಂದಿನಿಂದ ಎಲ್ಲಾ ಬ್ಯಾಂಕ್‌ಗಳು ಯಥಾರೀತಿ ಕಾರ್ಯನಿರ್ವಹಿಸಲಿವೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....