LIVE TV LocalCrimeNationalInternationalPoliticsEducationTechnologyEntertainmentSportsFeature
State News

ಗುಜರಾತ್ ಮಾದರಿಗೆ ಜನರಿಂದ ಅನುಮೋದನೆ ಪ್ರಹ್ಲಾದ್ ಜೋಶಿ

ಧಾರವಾಡ -

ಗುಜರಾತ್ ಮಾದರಿಗೆ ಜನರಿಂದ ಅನುಮೋದನೆ ಪ್ರಹ್ಲಾದ್ ಜೋಶಿ ಬಣ್ಣನೆ ಹೌದು ಗುಜರಾತ್‍ ವಿಧಾನಸಭೆ ಫಲಿತಾಂಶ ಭಾರತೀಯ ಜನತಾ ಪಕ್ಷ ಸ್ಪಷ್ಟ ಬಹುಮತ ಪಡೆದು ಐತಿಹಾಸಿಕ ದಾಖಲೆ ನಿರ್ಮಿಸಿದೆ ಗುಜರಾತ್ ಮಾದರಿಯನ್ನು ಜನರು ಅನುಮೋದಿಸಿದ್ದಾರೆ ಮತ್ತು ಸ್ವೀಕರಿಸುತ್ತಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಎಂದು ಹೇಳಿದ್ದಾರೆ.

ಗುಜರಾತ್ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿರುವ ಜೋಶಿಯವರು ಗುಜರಾತ್‍ನಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿರುವುದು ಸಂತಸದ ಸಂಗತಿ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ದೇಶದ ಜನತೆಯ ಮನ್ನಣೆಯಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.ಮತದಾರರು ಜಾತಿ ಮತ್ತು ಧರ್ಮ ಆಧಾರಿತ ರಾಜಕೀಯ ಲೆಕ್ಕಾಚಾರ ಗಳನ್ನು ಮೀರಿ ರಾಜ್ಯದ ಹಾಗೂ ದೇಶದ ಅಭಿ ವೃದ್ಧಿ ಮುಖ್ಯ ಎಂಬುದನ್ನು ಎತ್ತಿ ತೋರಿಸಿದ್ದಾರೆ.

ಗುಜರಾತ್ ರಾಜ್ಯದ ಮತದಾರರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭರವಸೆ ಇಟ್ಟಿದ್ದಾರೆ ಎಂಬುದಕ್ಕೆ ಈ ಫಲಿತಾಂ ಶವೇ ಸಾಕ್ಷಿ.ಎಲ್ಲಾ ಸಮೀಕ್ಷೆಗಳನ್ನು ಮೀರಿ ಈ ಫಲಿತಾಂಶ ಬಂದಿರುವುದು ಮೋದಿಯವರ ಜನಪ್ರಿಯತೆಗೆ ಹಿಡಿದ ಕನ್ನಡಿ ಎಂದು ಪ್ರತಿಕ್ರಿ ಯಿಸಿದ್ದಾರೆ.

ಪ್ರತಿಪಕ್ಷದ ನಾಯಕರುಗಳು ಪ್ರಧಾನಿ ಮೋದಿ ಯವರನ್ನು ರಾವಣ, ಭಸ್ಮಾಸುರ ಎಂದೆಲ್ಲಾ ಕರೆದು ಹೀಯಾಳಿಸಿದ್ದರು.ಆದರೆ ಪ್ರಧಾನಿ ಮೋದಿಯವರ ವ್ಯಕ್ತಿತ್ವ ಹಾಳು ಮಾಡುವ ವಿಪಕ್ಷಗಳ ಹುನ್ನಾರಕ್ಕೆ ಗುಜರಾತ್ ಜನತೆ ಚುನಾವಣೆಯಲ್ಲಿ ತಕ್ಕ  ಪಾಠ ಕಲಿಸಿದ್ದಾರೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶವು ಸುಭದ್ರವಾಗಿದ್ದು, ಅಭಿವೃದ್ಧಿ ಹೊಂದಿದ ದೇಶವಾಗಿ ಹೊರಹೊಮ್ಮುತ್ತಿದೆ. ಭಾರತ ವಿಶ್ವಗುರುವಾಗುವತ್ತ ದಾಪುಗಾಲು ಇಡುತ್ತಿದೆ ಎಂದು ಸಚಿವ ಜೋಶಿಯವರು ಹೇಳಿದ್ದಾರೆ.

ವಿಪಕ್ಷಗಳವರು ಏನೇ ಹೇಳಿದರೂ ದೇಶದ ಜನತೆ ಮೋದಿ ನಾಯಕತ್ವಕ್ಕೆ ಮನ್ನಣೆ ನೀಡಿರುವುದು ಇದೊಂದು ಸ್ಪಷ್ಟ ಉದಾಹರಣೆ ಎಂದಿದ್ದಾರೆ. ಭಾರತೀಯ ಜನತಾ ಪಕ್ಷಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟ ಮತದಾರರಿಗೆ ಧನ್ಯವಾದ ಅರ್ಪಿ ಸುತ್ತೇನೆ ಎಂದೂ ಸಚಿವ ಜೋಶಿ ಹೇಳಿದ್ದಾರೆ.

 

ವರದಿ ಚಕ್ರವರ್ತಿ ಸುದ್ದಿ ಸಂತೆ ನ್ಯೂಸ್.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....