LIVE TV LocalCrimeNationalInternationalPoliticsEducationTechnologyEntertainmentSportsFeature
Local News

ರೈತ ಕಾರ್ಮಿಕ ವಿರೋಧಿ ಹೊಸ ಕಾಯ್ದೆಗಳ ಪ್ರತಿಗಳನ್ನು ಧಹಿಸಿ ಪ್ರತಿಭಟನೆ

ಹುಬ್ಬಳ್ಳಿ - ಎಪಿಎಂಸಿ ಹಮಾಲಿ ಕಾರ್ಮಿಕರ ಒಕ್ಕೂಟದ ಸದಸ್ಯರು ಸಿಐಟಿಯು ನೇತೃತ್ವದಲ್ಲಿ ಇಂದು ರೈತ ಕಾರ್ಮಿಕ ವಿರೋಧಿ ಹೊಸ ಕಾನೂನುಗಳ ಪ್ರತಿಗಳನ್ನು ಧಹಿಸಿ ಪ್ರತಿಭಟನೆ ನಡೆಸಲಾಯಿತು. ನಗರದ APMC ಯಾರ್ಡ್ ನಲ್ಲಿ ಪ್ರತಿಭಟನೆ ಮಾಡಲಾಯಿತು.ಕೇಂದ್ರ ಸರಕಾರ ಕೂಡಲೇ ಈ ಜನವಿರೋಧಿ ಕಾನೂನುಗಳನ್ನು ವಾಪಸ್ಸ ಪಡೆಯಲು ಆಗ್ರಹಿಸಿದರು ನಂತರ ಎಪಿಎಂಸಿ ಕಾರ್ಯದರ್ಶಿ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ರೈತ ವಿರೋಧಿ ಕೃಷಿ ಕಾಯಿದೆಗಳನ್ನು ಹಾಗೂ ಜನ ವಿರೋಧಿ ವಿದ್ಯುತ್ ಮಸೂದೆಯನ್ನು ಹಿಂಪಡೆಯಲು ಒತ್ತಾಯಿಸಿ ದೇಶದ ರೈತ ಸಮೂಹವು ದೆಹಲಿ ಸೇರಿದಂತೆ ದೇಶದಾಧ್ಯಂತ ನಡೆಸುತ್ತಿರುವ ಹೋರಾಟ ತೀವ್ರವಾಗುತ್ತಿದೆ. ಇದೇ ಸಂದರ್ಭದಲ್ಲಿ ಬಂಡವಾಳಗಾರರ ಪರವಾಗಿರುವ 4 ಕಾರ್ಮಿಕ ಸಂಹಿತೆಗಳನ್ನು ರದ್ಧುಗೊಳಿಸಲು ಒತ್ತಾಯಿಸಿ ಹಾಗು ಇತರೆ ಬೇಡಿಕೆಗಳನ್ನು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕೆಲಸದ ಸ್ಥಳಗಳಲ್ಲಿ ರಾಷ್ಟ್ರಾದ್ಯಂತ ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ.

ಇಂದು ರಾಜ್ಯಾದ್ಯಂತ ಸಂಘಟಿತ ಕಾರ್ಮಿಕರು ಪ್ರತಿ ಕಾರ್ಖಾನೆಗಳ ಎದುರು ಹಾಗು ಬಿಸಿಯೂಟ, ಅಂಗನವಾಡಿ, ಗ್ರಾಮ ಪಂಚಾಯತ, ಹಮಾಲಿ, ಬೀದಿಬದಿ, ಬೀಡಿ, ಕಟ್ಟಡ ಮುಂತಾದ ಅಸಂಘಟಿತ ಕಾರ್ಮಿಕರು ಮತ್ತು ವಿವಿಧ ಗುತ್ತಿಗೆ ಕಾರ್ಮಿಕರು ತಮ್ಮ ಕೆಲಸದ ಸ್ಥಳಗಳಲ್ಲಿ ಕರಾಳ ಕಾನೂನುಗಳಾದ 4 ಕಾರ್ಮಿಕ ಸಂಹಿತೆಗಳು, ಮೂರು ಕೃಷಿ ಕಾನೂನುಗಳು ಹಾಗು ವಿದ್ಯುತ್ ಕಾನೂನುಗಳ ಪ್ರತಿಗಳನ್ನು ಸುಡುವುದರ ಮೂಲಕ ಪ್ರತಿಭಟನೆ ನಡೆಸಲಾಗುತ್ತಿದೆ.

ಹೊಸ ವರ್ಷದ ದಿನವನ್ನು “ಕಾರ್ಮಿಕ ಹಕ್ಕುಗಳನ್ನು ಉಳಿಸುತ್ತೇವೆ, ರೈತರ ಬದುಕನ್ನು ರಕ್ಷಿಸುತ್ತೇವೆ, ಕಾರ್ಫೋರೇಟ್ ಹಿಡಿತದಿಂದ ದೇಶವನ್ನು ಕಾಪಾಡುತ್ತೇವೆ.” ಎಂಬ ಪ್ರತಿಜ್ಞೆ ಯೊಂದಿಗೆ ಸ್ವಾಗತಿಸಲಾಗುತ್ತಿದೆ.

ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ ಒಕ್ಕೂಟದ ಅಧ್ಯಕ್ಷ ಬಸವಣ್ಣೆಪ್ಪ ನೀರಲಗಿ, ಪ್ರಧಾನ ಕಾರ್ಯದರ್ಶಿ ಗುರುಸಿದ್ದಪ್ಪ ಅಂಬಿಗೇರ ಮುಖಂಡರಾದ ಕರಿಯಪ್ಪ ದಳವಾಯಿ, ಕರಿಯಪ್ಪ ಗಿರಿಸಾಗರ, ಹುಸೇನಸಾಬ ನದಾಫ್, ಕತಾಲಸಾಬ ಮುಲ್ಲಾ, ಮೊಹ್ಮದರಫೀಕ್ ಮುಳಗುಂದ, ಹನಮಮತ ಅಂಬಿಗೇರ, ಗಾಳೆಪ್ಪ ಮುತ್ಯಾಳ ಮುಂತಾದವರು ನೇತೃತ್ವವಹಿಸಿದ್ದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....