LIVE TV LocalCrimeNationalInternationalPoliticsEducationTechnologyEntertainmentSportsFeature
State News

PSI ಬೈರಪ್ಪ ಬಂಧನ - ವಶಕ್ಕೆ ತಗೆದುಕೊಂಡು ವಿಚಾರಣೆ ಮಾಡುತ್ತಿರುವ ಪೊಲೀಸರು......

ಬೆಂಗಳೂರು -

ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ಹಾಗೂ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದ ಆರೋಪದಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ ಕೆ.ಎಸ್. ಬೈರಪ್ಪ ಅವರನ್ನು ಕೆಂಗೇರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ ರೇವತಿ ಎಂಬುವರು ನೀಡಿದ ದೂರು ಆಧರಿಸಿ ಕೆ.ಎಸ್.ಬೈರಪ್ಪ ಅವರನ್ನು ಬಂಧಿಸಲಾಗಿದೆ.ಕೃತ್ಯ ನಡೆದ ಸ್ಥಳ ಆಧರಿಸಿ ತಾವರೆಕೆರೆ ಪೊಲೀಸರಿಗೆ ಪ್ರಕರಣ ವರ್ಗಾವಣೆ ಮಾಡಲಾಗಿದೆ. ಮುಂದಿನ ತನಿಖೆಯನ್ನು ಅಲ್ಲಿನ ಪೊಲೀಸರು ನಡೆಸಲಿದ್ದಾರೆ ಎಂದು ನೈರುತ್ಯ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣನವರ್ ತಿಳಿಸಿದ್ದಾರೆ.

ಬೈರಪ್ಪ ಅವರು ಸದ್ಯ ನಗರ ಪೊಲೀಸ್ ಕಮಿಷನರ್ ಕಚೇರಿಯ ಕಂಟ್ರೋಲ್ ರೂಮ್ ವಿಭಾಗದಲ್ಲಿ ಪಿಎಸ್‌ಐ ಆಗಿ ಕೆಲಸ ಮಾಡುತ್ತಿದ್ದಾರೆ.ಆರಂಭದಲ್ಲಿ ಕೆಂಗೇರಿ ಠಾಣೆಯ ಪೊಲೀಸರಿಗೆ ರೇವತಿ ದೂರು ನೀಡಿದ್ದರು ಆ ದೂರು ಆಧರಿಸಿ ಪೊಲೀಸರು ಜುಲೈ 13ರಂದು ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡಿದ್ದರು ಬಳಿಕ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದ ರೇವತಿ, ಪತಿಯ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು

ಇದೀಗ ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚನಾಪುರ ನಿವಾಸಿಯಾಗಿರುವ ಬೈರಪ್ಪ ಅವರು ಐದು ವರ್ಷದ ಹಿಂದೆ ರೇವತಿ ಅವರನ್ನು ಮದುವೆ ಆಗಿದ್ದರು. ದಂಪತಿಗೆ ಮೂರು ವರ್ಷದ ಹೆಣ್ಣು ಮಗುವಿದೆ.

'ತಾನು ಪಿಎಸ್‌ಐ ಆಗಿದ್ದು, ಮದುವೆ ವೇಳೆ ವರದಕ್ಷಿಣೆ ಕೊಟ್ಟಿಲ್ಲ. ತವರು ಮನೆಯಿಂದ ₹50 ಲಕ್ಷ ತೆಗೆದುಕೊಂಡು ಬರುವಂತೆ ಒತ್ತಾಯಿಸಿ ಮೇಲೆ ಹಲ್ಲೆ ಮಾಡಿದ್ದಾರೆ. ಪತಿ ಮನೆಯವರೂ ಸಹ ಕಿರುಕುಳ ನೀಡಿದ್ದಾರೆ. ಪ್ರಶ್ನಿಸಿದಕ್ಕೆ ನನ್ನ ತಂದೆಗೆ ಮಚ್ಚಿನಿಂದ ಹಲ್ಲೆ ಮಾಡುವುದಾಗಿ ಬೆದರಿಸಿದ್ದರು' ಎಂದು ರೇವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವರದಕ್ಷಿಣೆ ವಿಚಾರಕ್ಕಾಗಿ ತನ್ನ ಮೇಲೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡಿದ್ದಾರೆ. ಬೇರೆ ಯುವತಿಯ ಜತೆಗೆ ಸಲುಗೆ ಇದೆ ಅದನ್ನು ಪ್ರಶ್ನಿಸಿದ್ದಕ್ಕೆ ವಿಚ್ಛೇದನ ನೀಡುವಂತೆ ತಾಕೀತು ಮಾಡಿದ್ದಾರೆ ಎಂದು ರೇವತಿ ದೂರಿದ್ದಾರೆ.ಸಧ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮಾಡ್ತಾ ಇದ್ದಾರೆ.

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....