LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಣ ಇಲಾಖೆಯ ಅಧಿಕಾರಿಗೆ ವರ್ಗಾವಣೆಯ ಶಿಕ್ಷೆ ಪ್ರಶ್ನೆ ಮಾಡಿದಕ್ಕೆ ಅಮಾನತು.....

ಸರ್ಕಾರದ ವಿರುದ್ಧವೇ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದ ಅಧಿಕಾರಿಯನ್ನ ಎತ್ತಂಗಡಿ ಮಾಡಲಾಗಿದೆ. ಹೌದು ಸರ್ಕಾರದ ಅಧಿಕಾರಿಯಾಗಿ ನಿಯಮಗಳ ಉಲ್ಲಂಘನೆ ಮಾಡಿದ ಹಾಗೂ ಸರ್ಕಾರದ ವಿರುದ್ಧವೇ ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಪ್ರಾದೇಶಿಕ ಆಂಗ್ಲ ಕೇಂದ್ರದ ನಿರ್ದೇಶಕರನ್ನು ಶಿಕ್ಷಣ ಇಲಾಖೆ ನಿರ್ದೇಶಕ ಸ್ಥಾನದಿಂದ ಎತ್ತಂಗಡಿ ಮಾಡಲಾಗಿದೆ.

ನಿರ್ದೇಶಕರಾಗಿದ್ದ ಡಾ.ಬಿ.ಕೆ.ಎಸ್.ವರ್ಧನ್ ಅವರೇ ಎತ್ತಂಗಡಿಯಾಗಿರುವ ಅಧಿಕಾರಿಯಾಗಿದ್ದು ಇವರು ಇತ್ತೀಚೆಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ 'ನರೇಂದ್ರ ಮೋದಿಜಿ ಅವರಿಗೆ ದೇಶದ ಅಸ್ಪೃಶ್ಯ ಜನ ಸಮುದಾಯಗಳ ಪರವಾಗಿ ಜನ್ಮ ದಿನದ ಶುಭಾಶಯಗಳು. ಇನ್ನೊಂದು ಸಲ ನೀವು ಪ್ರಧಾನ ಮಂತ್ರಿಯಾದರೆ ಕಾಶಿ ವಿಶ್ವನಾಥನ ಆಣೆಯಾಗಿ ಸಾಮಾಜಿಕ ನ್ಯಾಯ ಪಾಲನೆ ಮಾಡಲು ಪ್ರಾಮಾಣಿಕವಾಗಿ ಮನಸು ಮಾಡಿ ಕನಿಷ್ಠ ಅಂತಹ ಶಿಕ್ಷಣ ಸಚಿವರನ್ನಾಗಿ ಮಾಡಿ ನಾನೂ ವಿವರವಾದ ಮನವಿ ಪತ್ರ ಬರೆಯುವೆ ಎಂದು ಸ್ಟೇಟಸ್ ಹಾಕಿದ್ದರು ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಇಲಾಖೆ ಶಿಸ್ತು ಕ್ರಮದ ರೂಪವಾಗಿ ನಿರ್ದೇಶಕ ಸ್ಥಾನದಿಂದ ವರ್ಗಾವಣೆ ಮಾಡಿ ಆ ಸ್ಥಾನಕ್ಕೆ ಡಿಎಸ್‌ಇಆರ್‌ಟಿ ನಿರ್ದೇಶಕಿ ವಿ.ಸುಮಂಗಲಾ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....