LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಾಮೂಹಿಕ ಅತ್ಯಾಚಾರ - ನಾಲ್ವರು ಯುವಕರ ಬಂಧನ - ರಾಮಮೂರ್ತಿ ಪೊಲೀಸರ ಕಾರ್ಯಾಚರಣೆ......

ಬೆಂಗಳೂರು -

ನೆರೆಯ ಬಾಂಗ್ಲಾದೇಶ ಮೂಲದ 23 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಸಂಬಂಧ ನಾಲ್ವರನ್ನು ರಾಮಮೂರ್ತಿ ನಗರ ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಬಾಂಗ್ಲಾದೇಶದ ಸಾಗರ್, ಮುಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹೈದರಾಬಾದಿನ ಹಕೀಲ್ ಎಂಬವರನ್ನು ಬಂಧಿಸಲಾಗಿದೆ.ಕೃತ್ಯದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಪೊಲೀಸರು ತನಿಖೆ ಶೋಧ ಮಾಡತಾ ಇದ್ದಾರೆ.

ಬೆಂಗಳೂರಿ ಗೆ ಬಂದಿದ್ದ ಆರೋಪಿಗಳು ರಾಮಮೂ ರ್ತಿನಗರದ ಎನ್‌ಆರ್‌ಔ ಲೇಔಟ್‌ನಲ್ಲಿ ವಾಸವಾಗಿ ದ್ದರು.ಸಂತ್ರಸ್ತೆ ಹಾಗೂ ಆರೋಪಿ ಮುಹಮ್ಮದ್ ಬಾಬಾ ಶೇಕ್ ಸಂಬಂಧಿಕರಾಗಿದ್ದು ರಿದಾಯ್ ಬಾಬು ಹಾಗೂ ಇತರರ ಜೊತೆ ಅಕ್ರಮವಾಗಿ ಭಾರತ ಕ್ಕೆ ಬಂದಿದ್ದರು.ಈ ಮಧ್ಯೆ ಯುವತಿಯನ್ನು ವೇಶ್ಯಾ ವಾ ಟಿಕೆಗೆ ದೂಡಿದ್ದರು ಎಂದು ಹೇಳಲಾಗಿದೆ.ಅದಕ್ಕೆ ಯುವತಿ ಒಪ್ಪದಿದ್ದಾಗ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ

ಆರೋಪಿಗಳೊಂದಿಗೆ ಮಹಿಳೆಯೊಬ್ಬಳು ಸೇರಿ ಕೊಂಡು ಐವರು ಯುವಕರು ಸಂತ್ರಸ್ತೆಗೆ ಲೈಂಗಿಕ ಮತ್ತು ದೈಹಿಕವಾಗಿ ದೌರ್ಜನ್ಯ ಎಸಗಿದ್ದಾರೆ. ಅಲ್ಲದೆ, ಅದನ್ನು ಚಿತ್ರೀಕರಿಸಿಕೊಂಡು ವೈರಲ್ ಮಾಡಿದ್ದಾರೆ. ಈ ವೀಡಿಯೊ ಬಾಂಗ್ಲಾದೇಶ ಸೇರಿ ಭಾರತದ ಈಶಾ ನ್ಯ ರಾಜ್ಯಗಳಲ್ಲಿ ವೈರಲ್ ಆಗಿತ್ತು. ಅಸ್ಸಾಂ ರಾಜ್ಯದ ಪೊಲೀಸರಿಂದ ವೀಡಿಯೊ ಕುರಿತು ತನಿಖೆ ನಡೆಸಿ ದಾಗ ಕೃತ್ಯದಲ್ಲಿ ಬಾಂಗ್ಲಾದೇಶದ ಪ್ರಜೆಗಳು ಭಾಗಿ ಯಾರುವುದು ಬೆಳಕಿಗೆ ಬಂದಿತ್ತು.

ಮತ್ತೊಂದೆಡೆ ಬಾಂಗ್ಲಾದೇಶದಲ್ಲಿಯೂ ವಿಡಿಯೋ ವೈರಲ್ ಆಗಿದ್ದು, ಸಂತ್ರಸ್ತೆ ಬಗ್ಗೆ ಮಾಹಿತಿ ಸಂಗ್ರಹಿಸಿ ಆಕೆಯ ಕುಟುಂಬ ಸದಸ್ಯರನ್ನು ಪತ್ತೆ ಹಚ್ಚಿದ್ದರು. ಆಗ ಆರೋಪಿ ಮುಹಮ್ಮದ್ ಬಾಬಾ ಶೇಕ್ ಜತೆ ಹೋಗಿದ್ದಾಗಿ ಮಾಹಿತಿ ಸಿಕ್ಕಿತ್ತು.ಬಳಿಕ ಟವರ್ ಲೋಕೇಷನ್ ಆಧರಿಸಿ ಮಾಹಿತಿ ಸಂಗ್ರಹಿಸಿದಾಗ ಭಾರತದಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ

ಇನ್ನೂ ಈ ಕೃತ್ಯವೆಸಗಿ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಆವಲಹಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಘಟನೆ ಬೆಳಕಿಗೆ ಬಂದ ಬೆನ್ನಲೇ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಹೆಚ್ಚುವರಿ ಪೊಲೀಸ್ ಆಯುಕ್ತ ಎಸ್.ಮುರುಗನ್, ಡಿಸಿಪಿ ಶರಣಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಅನಂತರ ನೇರವಾಗಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಈ ಬಗ್ಗೆ ಮಾಹಿತಿ ಸಿಕ್ಕ ಬಳಿಕ ಸಂದೀಪ್ ಪಾಟೀಲ್ ನೇತೃತ್ವದ ತಂಡ ಕಾರ್ಯಾ ಚರಣೆ ನಡೆಸಿದಾಗ ಆರೋಪಿಗಳು ಬೆಂಗಳೂರಿನ ರಾಮಮೂರ್ತಿನಗರ ಮತ್ತು ಆವಲಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವುದು ಪತ್ತೆಯಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....