LIVE TV LocalCrimeNationalInternationalPoliticsEducationTechnologyEntertainmentSportsFeature
State News

ನಾನು ತಪ್ಪು ಮಾಡಿಲ್ಲ ಮಾಡಿಲ್ಲ ರಮೇಶ್ ಜಾರಕಿಹೋಳಿ ಮಾತು

ಬೆಂಗಳೂರು -

ರಾಸಲೀಲೆ ಪ್ರಕರಣದಲ್ಲಿ ಗಂಭೀರ ಆರೋಪ ಎದುರಿಸುತ್ತಿರುವ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ, ತಮ್ಮ ವಿರುದ್ಧದ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಜೊತೆಗೆ ನಾನು ತಪ್ಪು ಮಾಡಿಲ್ಲ ಮಾಡಿಲ್ಲ ನಾನೇಕೆ ರಾಜೀನಾಮೆ ನೀಡಲಿ ಎಂದು ಅವರು ಪ್ರಶ್ನಿಸಿದ್ದಾರೆ.ಈ ಒಂದು ಪ್ರಕರಣ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಅವರು ಸ್ಪಷ್ಟೀಕರಣ ನೀಡಿದರು

ತಮ್ಮ ವಿರುದ್ಧ ದಾಖಲಾದ ದೂರಿನ ಕುರಿತು ಬೆಂಗಳೂರಿನಲ್ಲಿ ಮೊದಲ ಪ್ರತಿಕ್ರಿಯೆ ನೀಡಿರುವ ರಮೇಶ ಜಾರಕಿಹೊಳಿ, ಈ ಸಿ.ಡಿ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯಲಿ. ಮಂತ್ರಿ ಮಾತ್ರವಲ್ಲ, ಎಂಎಲ್ಸಿ ಸ್ಥಾನಕ್ಕೆ ಕೂಡ ರಾಜೀನಾಮೆ ನೀಡುತ್ತೇನೆ. ಆದರೆ ಇದರಲ್ಲಿ ನಾನು ಯಾವುದೇ ತಪ್ಪಿಲ್ಲ. ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ. ದಿನೇಶ ಕಲ್ಲಹಳ್ಳಿ ಯಾರೋ ಗೊತ್ತಿಲ್ಲ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ಹೇಳಿದ್ದಾರೆ.ದೈವದ ಮೇಲೆ ನನಗೆ ನಂಬಿಕೆ ಇದೆ. ದೇವರ ಸಾಕ್ಷಿಯಾಗಿ ಹೇಳುತ್ತೇನೆ. ಆ ಯುವತಿ ಬಗ್ಗೆ ನನಗೆ ಗೊತ್ತಿಲ್ಲ. ಏನಾದರೂ ತಪ್ಪು ಮಾಡಿದ್ರೆ ಗಲ್ಲಿಗೇರಿಸಿ ಎಂದು ಹೇಳಿದ್ದಾರೆ.ನಾನು ಮೈಸೂರಿನಲ್ಲಿದ್ದೆ. ಮಾಧ್ಯಮ ದಲ್ಲಿ ಸುದ್ದಿ ತಿಳಿದು ಆಘಾತವಾಯಿತು. ಈ ಸಿ.ಡಿ. ಶೇಕಡ ನೂರರಷ್ಟು ನಕಲಿ. ಈ ಸಿ.ಡಿ. ಸ್ಫೋಟ ಎಲ್ಲ ರಾಜಕೀಯ ಗಿಮಿಕ್. ನನಗೆ ಸಿಡಿ ರಾಜಕೀಯದ ಬಗ್ಗೆ ಗೊತ್ತಿಲ್ಲ. ಇದರ ಬಗ್ಗೆ ಸಮಗ್ರ ತನಿಖೆ ಆಗಲಿ. ತಪ್ಪೇ ಮಾಡದ ನಾನೇಕೆ ರಾಜೀನಾಮೆ ನೀಡಲಿ? ಎಂದಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....