LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹುಟ್ಟು ಹಬ್ಬದ ದಿನದಂದೇ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ ಹಿರಿಯ ಸಂಸದ ಶ್ರೀನಿವಾಸ್ ಪ್ರಸಾದ್.....

ಮೈಸೂರು -

ರಾಜ್ಯದ ಹಿರಿಯ ರಾಜಕಾರಣಿ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಹೌದು ಸಕ್ರಿಯ ರಾಜ ಕಾರಣಕ್ಕೆ ಚಾಮರಾಜನಗರ ಕ್ಷೇತ್ರದ ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿವೃತ್ತಿ ಘೋಷಿಸಿದ್ದು ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ವಿಶೇಷವಾಗಿ ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿ ರುವ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ಹುಟ್ಟಿದ ದಿನವಾದ ಇಂದು ಅಂದರೆ ಆಗಸ್ಟ್ 6ರಂದು ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಹೇಳಿದ್ದಾರೆ ನನ್ನ ಆತ್ಮತೃಪ್ತಿಯಿಂದಲೇ ಚುನಾವಣಾ ರಾಜಕೀ ಯಕ್ಕೆ ನಿವೃತ್ತಿ ಘೋಷಿಸುತ್ತಿದ್ದೇನೆ ಈ ಬಗ್ಗೆ ಬೇಸರ ವಿಲ್ಲ,ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸು ವುದಿಲ್ಲ 14 ಬಾರಿ ಚುನಾವಣೆಯಲ್ಲಿ ನಿಂತು ನನಗೆ ಸಾಕು ಅನಿಸಿದೆ ಎಂದರು.

ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯ ಸಿದ್ದೆ.ಆದರೆ ರಾಜಕೀಯ ಬೆಳವಣಿಗೆಗಳು ಬೇರೆ ತಿರುವು ಪಡೆದ ಕಾರಣ ಸ್ಪರ್ಧೆ ಮಾಡಬೇಕಾಯಿತು. ಈಗ ನಾನು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲು ತೀರ್ಮಾನಿಸಿದ್ದೇನೆ, ನನ್ನ ನಿರ್ಧಾರವನ್ನು ಬದಲಿಸುವುದೂ ಇಲ್ಲ ಎಂದು ಹೇಳಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಪಕ್ಷದ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಇನ್ನು ಕೆಲವು ನಾಯಕ ರೊಂದಿಗೆ ಮನಸ್ತಾಪ ಉಂಟಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ವಿ.ಶ್ರೀನಿವಾಸ ಪ್ರಸಾದ್ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದರು.
ಇದು ನನ್ನ ಅಂತಿಮ ನಿಲುವು ಯಾವುದೇ ಕಾರಣಕ್ಕೂ ಇನ್ನು ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಈ‌ ಮಾತಿನಿಂದ ಹಿಂದೆ ಸರಿಯುವುದೂ ಇಲ್ಲ ಎಂದು ಹೇಳಿದ್ದಾರೆ. ನಾನು ಆತ್ಮತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ.50 ವರ್ಷದ ನನ್ನ ರಾಜಕೀಯ ಜೀವನದ ಪುಸ್ತಕ ಬಿಡುಗಡೆಯಾಗಲಿದ್ದು, ಅದರಲ್ಲಿ ನನ್ನ ರಾಜಕೀಯ ಜೀವನದ ಎಲ್ಲಾ ಏಳು ಬೀಳುಗಳನ್ನು ದಾಖಲಿಸಿ ದ್ದೇನೆ ಎಂದು ಸಹ ಪ್ರಕಟಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....