LIVE TV LocalCrimeNationalInternationalPoliticsEducationTechnologyEntertainmentSportsFeature
State News

ವರದಿ ಪ್ರಸಾರ ಮಾಡದಂತೆ ನ್ಯಾಯಾಲಯ ಮೆಟ್ಟಿಲೇರಿದ ಆರು ಸಚಿವರು.....

ಬೆಂಗಳೂರು -

ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಪ್ರಕರಣ ಬಯಲಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಈಗ ಮತ್ತೊಂದು ಮಹತ್ವದ ಬೆಳವಣಿಗೆ ಯಾಗಿದೆ‌. ಹೌದು ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ವರದಿ ಪ್ರಸಾರ ಮಾಡದಂತೆ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಬಾಂಬೆಯಲ್ಲಿ ಬೀಡು ಬಿಟ್ಟಿದ್ದ ಆರು ಸಚಿವರು, ನ್ಯಾಯಾಲಯದ ಮೊರೆ ಹೋಗಿದ್ದಾರೆ.

ತಮ್ಮ ವಿರುದ್ಧ ಮಾನಹಾನಿಕಾರಿ ಸುದ್ದಿಯನ್ನು ನಿರ್ಬಂಧಿಸುವಂತೆ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್, ಕೃಷಿ ಸಚಿವ ಬಿ. ಸಿ. ಪಾಟೀಲ್, ಕ್ರೀಡಾ ಸಚಿವ ನಾರಾಯಣಗೌಡ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಸಂಬಂಧ ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯ, ನಾಳೆ ಆದೇಶ ನೀಡುವ ಸಾಧ್ಯತೆಯಿದೆ ಕೋರ್ಟ್ ಮೊರೆ ಹೋಗಿರುವ ಆರು ಸಚಿವರ ನಡೆ ತೀವ್ರ ಕುತೂಹಲ ಕೆರಳಿಸಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು. ಇದರೊಂದಿಗೆ ಯಾವ ಕಾರಣಕ್ಕಾಗಿ ಇವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು ಎಂಬುದು ಕುತೂಹಲ ಕೆರಳಿಸಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....