LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಪ್ರಕಟಗೊಂಡಿತು SSLC ಫಲಿತಾಂಶ - 10 ವರ್ಷಗಳ ನಂತರ ದಾಖಲಾಯಿತು ಅತಿ ಹೆಚ್ಚಿನ ಫಲಿತಾಂಶ.....

ಬೆಂಗಳೂರು -

ಮಾರ್ಚ್‌ 28 ರಿಂದ ಏಪ್ರಿಲ್‌ 11 ರ ವರೆಗೆ ನಡೆದಿದ್ದ ಎಸ್.ಎಸ್.‌ಎಲ್.‌ಸಿ. ಪರೀಕ್ಷಾ ಫಲಿತಾಂಶ ಇಂದು ಪ್ರಕಟ ವಾಗಿದ್ದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಮಾಹಿತಿ ನೀಡಿದ್ದು
8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿ ಕೊಂಡಿದ್ದರು.8,07,206 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು.ಒಟ್ಟಾರೆ ಶೇ.85.63 ಮಕ್ಕಳು SSLC ಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.ಪ್ರತಿ ಬಾರಿ ಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು ಶೇ.90.29 ಉತ್ತೀರ್ಣರಾಗಿದ್ದಾರೆ.ಇನ್ನು ಶೇ.81.30 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಗ್ರೇಡ್‌ ವೈಸ್‌ ಫಲಿತಾಂಶ:
A+ (90-100%): 1,18,875
A (80-89%): 1,82,600
B+ (70-79%): 1,73,528
B (60-69%): 1,43,900
C+ (50-59%): 87,801
C (35-49%): 14,627
ಈ ಬಾರಿ ಎಸ್.ಎಸ್.‌ಎಲ್.‌ಸಿ. ಪರೀಕ್ಷೆ ಯಾವುದೇ ಅಡೆತಡೆಯಿಲ್ಲದೇ ನಡೆದಿದ್ದು 2022 ರ ಕರ್ನಾಟಕ ಎಸ್.ಎಸ್.‌ಎಲ್.‌ಸಿ.ಪರೀಕ್ಷೆಯಲ್ಲಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಮಾರ್ಚ್ 28, 2022 ರಿಂದ ಏಪ್ರಿಲ್ 11 ,2022 ರವರೆಗೆ ರಾಜ್ಯದ 3440 ಕೇಂದ್ರಗಳಲ್ಲಿ ಪರೀಕ್ಷೆ ಯಶಸ್ವಿಯಾಗಿ ನಡೆದಿತ್ತು. ಫಲಿತಾಂಶ karresults.nic.in ಈ ವೆಬ್‌ಸೈಟ್‌ ನಲ್ಲಿಯೂ ಲಭ್ಯವಿದ್ದು ವಿದ್ಯಾರ್ಥಿಗಳು ವೀಕ್ಷಿಸಬಹು ದಾಗಿದೆ
ಮರು ಮೌಲ್ಯಮಾಪನ - ಫಲಿತಾಂಶದ ಬಳಿಕ ಮರುಮೌಲ್ಯಮಾಪನ ಅಥವಾ ಅಂಕಗಳ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಮೂರು ದಿನಗಳಲ್ಲೇ ತಮ್ಮ ಉತ್ತರ ಪತ್ರಿಕೆಯ ಪ್ರತಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೆಬ್ ಸೈಟ್ ನಲ್ಲಿ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ.ಈ ಮೂಲಕ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಉತ್ತರ ಪತ್ರಿಕೆ ಲಭ್ಯವಾಗು ವಂತೆ ಅನುಕೂಲ ಕಲ್ಪಿಸಲಾಗಿದೆ.ಈ ಮೊದಲು ಉತ್ತರ ಪತ್ರಿಕೆಯ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಮೌಲ್ಯಮಾಪನ ಅಥವಾ ಅಂಕಗಳ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಇಮೇಲ್ ವಿಳಾಸಕ್ಕೆ ಕಳುಹಿಸಲಾಗುತ್ತಿತ್ತು. ಆದರೆ ಇಮೇಲ್ ವಿಳಾಸ ನೀಡುವ ಸಂದರ್ಭದಲ್ಲಿ ಒಂದು ಅಕ್ಷರ ವ್ಯತ್ಯಾಸವಾದರೂ ಸಹ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ತಲುಪುತ್ತಿರಲಿಲ್ಲ.ಇದರಿಂದ ವಿಳಂಬವಾಗುತ್ತಿತ್ತು.
ಆದರೆ ಇದೀಗ ಮಂಡಳಿಯ ವೆಬ್ ಸೈಟ್ ನಲ್ಲಿ ಉತ್ತರ ಪತ್ರಿಕೆಯ ಪ್ರತಿಯನ್ನು ಅಪ್ ಲೋಡ್ ಮಾಡಲಿದ್ದು, ವಿದ್ಯಾರ್ಥಿಗಳು ನೀಡುವ ಮೊಬೈಲ್ ಸಂಖ್ಯೆಗೆ ಓಟಿಪಿ ಬಂದ ವೇಳೆ ಲಾಗಿನ್ ಕ್ರಿಯೇಟ್ ಮಾಡಬೇಕಾಗುತ್ತದೆ.ಆ ಬಳಿಕ ನೋಂದಣಿ ಸಂಖ್ಯೆ ಹಾಗೂ ಮೊಬೈಲ್ ಒಟಿಪಿ ಯನ್ನು ನಮೂದಿಸಿದರೆ ತಮ್ಮ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಯನ್ನು ವಿದ್ಯಾರ್ಥಿಗಳು ನೋಡಬಹುದಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....