ಕೊಪ್ಪಳ -
SSLC ವಿದ್ಯಾರ್ಥಿನಿ ಯೊಬ್ಬಳು ನೇಣಿಗೆ ಶರಣಾದ ಘಟನೆ ಕೊಪ್ಪಳ ದಲ್ಲಿ ನಡೆದಿದೆ ಡ್ಯಾನ್ಸ್ ಮಾಡದಂತೆ ಪೋಷಕರು ಬುದ್ಧಿವಾದ ಹೇಳಿದ್ದರಿಂದ ಮನನೊಂದ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿ ಕೊಂಡಿರುವ ದಾರುಣ ಘಟನೆ ಕೊಪ್ಪಳ ತಾಲೂಕಿನ ಅಗಳಗೇರಿ ಗ್ರಾಮದಲ್ಲಿ ನಡೆದಿದೆ.
ಜಯಶ್ರೀ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾ ಗಿದೆ ಡ್ಯಾನ್ಸ್ ಮಾಡುವ ವಿಚಾರವಾಗಿ ಪೋಷಕರು ಆಕೆಗೆ ಬುದ್ಧಿವಾದ ಹೇಳಿದ್ದರು ಎನ್ನಲಾಗಿದೆ. ಇದೇ ವಿಚಾರದಿಂದ ಆಕೆ ಬೇಸರಗೊಂಡಿದ್ದಳು ಎಂದು ತಿಳಿದುಬಂದಿದೆ.
ಬಳಿಕ ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವುದು ಮನೆಯವರಿಗೆ ಗೊತ್ತಾಗಿದೆ. ಘಟನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದು, ಗ್ರಾಮದಲ್ಲೂ ದುಃಖದ ವಾತಾವರಣ ನಿರ್ಮಾಣವಾಗಿದೆ.
ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಕೊಪ್ಪಳ.....