LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯಕ್ಕೆ ಮಾದರಿಯಾದ ಸರ್ಕಾರಿ ಶಾಲಾ ಶಿಕ್ಷಕಿ - ಕೊಟ್ಟ ಕೆಲಸವನ್ನು ಥಟ್ ಅಂತಾ ಮುಗಿಸಿ ಮೆಚ್ಚುಗೆಗೆ ಪಾತ್ರರಾದ ಶಾಂತಮ್ಮ ಟೀಚರ್.....

ರಾಮನಗರ -

7 ದಿನದಲ್ಲೇ ಸಮೀಕ್ಷೆ ಮುಗಿಸಿ ಜಿಲ್ಲಾಧಿಕಾರಿಯಿಂದ ಮೆಚ್ಚುಗೆಗೆ ಪಾತ್ರರಾದ ಚಿತ್ರಣವೊಂದು ರಾಮನಗರ ದಲ್ಲಿ ನಡೆದಿದೆ ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆ. 22ರಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಮಗೆ ವಹಿಸಿದ ಮನೆಗಳನ್ನು ಕೇವಲ 7 ದಿನದಲ್ಲಿ ಚನ್ನಪಟ್ಟಣ ತಾಲ್ಲೂಕಿನ ಅಂಬಾಡಹಳ್ಳಿಯು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ (ಯುಜಿಎಚ್‌ಪಿಎಸ್) ಸಹ ಶಿಕ್ಷಕಿ ಶಾಂತಮ್ಮ ಪೂರ್ಣ ಗೊಳಿಸಿದ್ದಾರೆ.

ಶಿಕ್ಷಕಿಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು, ಶಾಂತಮ್ಮ ಅವರನ್ನು ಸೋಮವಾರ ತಮ್ಮ ಕಚೇರಿಗೆ ಕರೆದು ವೈಯಕ್ತಿಕವಾಗಿ ₹1,001 ನಗದು ಬಹುಮಾನ ಹಾಗೂ ಅಭಿನಂದನಾ ಪತ್ರ ನೀಡಿದ್ದಾರೆ ತಮಗೆ ವಹಿಸಿದ ಕೆಲಸವನ್ನು ತ್ವರಿತವಾಗಿ ಮಾಡಿ ಮುಗಿಸಿರುವ ಶಿಕ್ಷಕಿಯ ವೃತ್ತಿಪರತೆಯನ್ನು ಕೊಂಡಾಡಿದ್ದಾರೆ.

86 ಮನೆಗಳ ಸಮೀಕ್ಷೆಯನ್ನ ಶಾಂತಮ್ಮ ಅವರಿಗೆ ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ, ಚನ್ನಂಕೇಗೌಡನ ದೊಡ್ಡಿ ಹಾಗೂ ಗೋವಿಂದೇಗೌಡನದೊಡ್ಡಿ ಗ್ರಾಮದ 86 ಮನೆಗಳನ್ನು ಸಮೀಕ್ಷೆ ಮಾಡುವಂತೆ ನಿಗದಿ ಪಡಿಸಲಾಗಿತ್ತು. ಸಮೀಕ್ಷೆ ಪೂರ್ಣಕ್ಕೆ 15 ದಿನಗಳಿದ್ದರೂ, ಶಾಂತಮ್ಮ ಅವರು ಅವಧಿಗೂ ಮುಂಚೆ ಕೇವಲ ಏಳೇ ದಿನದಲ್ಲಿ ಅಷ್ಟೂ ಮನೆಗಳ ಮಾಹಿತಿ ಸಂಗ್ರಹಿಸಿ ಸಮೀಕ್ಷೆ ಮುಗಿಸಿದ್ದರು.

'ಸಮೀಕ್ಷೆಯಲ್ಲಿ ನೀವು ತೋರಿದ ಆಸಕ್ತಿ, ಉತ್ಸಾಹ ಮತ್ತು ಪ್ರಾಮಾಣಿಕ ಪ್ರಯತ್ನವು ಸಮೀಕ್ಷೆ ಕಾರ್ಯ ತ್ವರಿತವಾಗಿ ಸಾಗಲು ಸಹಕಾರಿಯಾಗಿದೆ. ಸಮೀಕ್ಷಾ ಕಾರ್ಯಕ್ಕೆ ನೀವು ನೀಡಿದ ಸಹಕಾರ ಮತ್ತು ಉತ್ಸಾಹ ವನ್ನು ಜಿಲ್ಲಾಡಳಿತ ಪ್ರಶಂಸಿಸುತ್ತದೆ.

ತಮ್ಮ ಈ ಕಾರ್ಯಶ್ರದ್ದೆಗೆ ನನ್ನ ಸ್ವಂತ ಹಣದಿಂದ ನಗದು ಬಹುಮಾನ ನೀಡಿ ಶ್ಲಾಘಿಸಿದ್ದೇನೆ. ಮುಂದೆಯೇ ನಿಮ್ಮಿಂದ ಇಂತಹದ್ದೇ ಕಾರ್ಯಕ್ಷಮತೆಯನ್ನು ಜಿಲ್ಲಾಡ ಳಿತ ಬಯಸುತ್ತದೆ' ಎಂದು ಜಿಲ್ಲಾಧಿಕಾರಿ ಅಭಿನಂದನಾ ಪತ್ರದಲ್ಲಿ ತಿಳಿಸಿದ್ದಾರೆ.

 

ಸುದ್ದಿ ಸಂತೆ ನ್ಯೂಸ್ ರಾಮನಗರ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....