LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪೊಟೊ ವಿಡಿಯೋ ವೈರಲ್ ಬೆನ್ನಲ್ಲೇ ಶಿಕ್ಷಕ ಅಮಾನತು.....

ಉತ್ತರಪ್ರದೇಶ -

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ ಎನ್ನುವ ದೂರು ಆಗಾಗ ಕೇಳಿ ಬರುತ್ತಿದೆ ಕೆಲವರು ಸರ್ಕಾರದ ಸಂಬಳ ಪಡೆದು ಮಕ್ಕಳಿಗೆ ಪಾಠ ಮಾಡದೆ ಕಾಲಹರಣ ಮಾಡುತ್ತಿರು ತ್ತಾರೆ ಎನ್ನೊದಕ್ಕೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಶಿಕ್ಷಕ ವಿದ್ಯಾರ್ಥಿಯ ಬೋಳು ತಲೆಯ ಮೇಲೆ ತಬಲ ಬಾರಿಸಿದ ಪ್ರಕರಣ ತಾಜಾ ಉದಾಹರಣೆ ಈ ಘಟನೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಶಿಕ್ಷಕ ದಿನೇಶ್ ಕುಮಾರ್ ನನ್ನು ಅಮಾನತು ಮಾಡಲಾಗಿದೆ

ವಿದ್ಯಾರ್ಥಿಯ ಬೋಳು ತಲೆಯ ಮೇಲೆ 'ತಬಲ' ಬಾರಿಸಿ ಶಿಕ್ಷಕ ಗಹಗಹಿಸಿ ನಗುತ್ತಿರುವ ವಿಚಿತ್ರ ಘಟನೆ ಬೆಳಕಿಗೆ ಬರುತ್ತಿದ್ದಂತೆ ಈ ವಿಡಿಯೊವನ್ನು ಗಮನಿಸಿದ ಶಿಕ್ಷಣ ಅಧಿಕಾರಿ ಡಾ. ರಾಜೇಶ್ ಕುಮಾರ್ ತಕ್ಷಣ ಕ್ರಮ ಕೈಗೊಂಡು ಅಮಾನತುಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ. ಶಿಕ್ಷಣ ಇಲಾಖೆಯು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದೆ.ಉತ್ತರ ಪ್ರದೇಶದ ಎಟಾವಾ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬ, ವಿದ್ಯಾರ್ಥಿಯ ತಲೆಯನ್ನು ತಬಲ ಬಾರಿಸಲು ಬಳಸಿ ದ್ದಾನೆ. ತರಗತಿ ನಡೆಯುವ ಸಮಯದಲ್ಲಿಯೇ ಶಿಕ್ಷಕ ಈ ರೀತಿಯ ವರ್ತಿಸಿದ್ದಾನೆ. ಅಮಾನತುಗೊಂಡ ಶಿಕ್ಷಕನನ್ನು ದಿನೇಶ್ ಕುಮಾರ್ ಮಾಥುರ್ ಎನ್ನಲಾಗಿದೆnews_1791568120_0_742.webp

 

ವೈರಲ್ ಆದ ವಿಡಿಯೊದಲ್ಲಿ ಶಿಕ್ಷಕ ತರಗತಿಯೊಳಗೆ ಕುರ್ಚಿಯ ಮೇಲೆ ಕುಳಿತಿದ್ದರೆ, ವಿದ್ಯಾರ್ಥಿಯೊಬ್ಬ ಅವರ ಮುಂದೆ ನೆಲದ ಮೇಲೆ ಕುಳಿತಿರುವುದು ಕಂಡುಬರುತ್ತದೆ. ಮಾಥುರ್ ತಬಲ ಬಾರಿಸುವಂತೆ ಮಗುವಿನ ತಲೆಯ ಮೇಲೆ ತಟ್ಟುತ್ತಿರುವುದನ್ನು ಕಾಣಬಹುದು. ಈ ಘಟನೆ ಶಾಲೆಯಲ್ಲಿ ವಿದ್ಯಾರ್ಥಿಗಳ ಜತೆ ಶಿಕ್ಷಕರು ನಡೆದುಕೊಳ್ಳುವ ರೀತಿಯ ಬಗ್ಗೆ ಕಳವಳ ಹುಟ್ಟುಹಾಕಿದೆ.

ಶಿಕ್ಷಕ ಆ ಮಗುವಿನ ಬೋಳು ತಲೆಯನ್ನೇ ತಬಲದಂತೆ ಬಾರಿಸುತ್ತಾ ವಿಕೃತವಾಗಿ ನಕ್ಕಿದ್ದಾನೆ. ಈ ಇಡೀ ದೃಶ್ಯವನ್ನು ಶಿಕ್ಷಕನೇ ಸ್ವತಃ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಹಂಚಿಕೊಂಡಿದ್ದ. ಈ ವಿಡಿಯೊ ​ಶಿಕ್ಷಣ ಇಲಾಖೆಯ ಗಮನಕ್ಕೆ ಬಂದಿದ್ದು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ಸುದ್ದಿ ಸಂತೆ ನ್ಯೂಸ್ ಉತ್ತರಪ್ರದೇಶ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....