LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮುಖ್ಯಶಿಕ್ಷಕ ಖಾಜಪ್ಪ ದೊಡ್ಡಮನಿ ಅಮಾನತು - ಅಮಾನತು ಮಾಡಿ ಆದೇಶ ಮಾಡಿದ DDPI.....

ಅಫಜಲಪುರ -

ಮುಖ್ಯಶಿಕ್ಷಕ ಖಾಜಪ್ಪ ದೊಡ್ಡಮನಿ ಅಮಾನತು - ಅಮಾನತು ಮಾಡಿ ಆದೇಶ ಮಾಡಿದ DDPI.....

ಮಕ್ಕಳಿಗೆ ಹಾಲಿನ ಪೌಡರ್ ನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಮುಖ್ಯಶಿಕ್ಷಕರೊಬ್ಬನ್ನು ಅಮಾನತು ಮಾಡಿದ ಘಟನೆ ಅಫಜಲಪುರದಲ್ಲಿ ನಡೆದಿದೆ.ಅಫಜಲಪುರ ತಾಲ್ಲೂಕಿನ ಸ್ಟೇಷನ್ ಗಾಣಗಾಪುರದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಮಕ್ಕಳಿಗೆ ವಿತರಿಸುವ ಹಾಲಿನ ಪೌಡರ್ ಪ್ಯಾಕೆಟ್‌ಗಳನ್ನು ಕದ್ದು ಒಯ್ದ ಆರೋಪದ ಮೇಲೆ ಮುಖ್ಯ ಶಿಕ್ಷಕ ಖಾಜಪ್ಪ ದೊಡ್ಡಮನಿ ಅವರನ್ನು ಅಮಾನತು ಮಾಡಲಾಗಿದೆ.

ಶಾಲೆಯಿಂದ ಪ್ಯಾಕೆಟ್‌ಗಳನ್ನು ಕದ್ದುಕೊಂಡು ಖಾಜಪ್ಪ ದೊಡ್ಡಮನಿ ಮನೆಗೆ ಸಾಗಿಸುವಾಗ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದರಂತೆ.ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ ಪಾಟೀಲ ಪರಿಶೀಲನೆಗಾಗಿ ಅಕ್ಷರ ದಾಸೋಹ ತಾಲ್ಲೂಕು ಅಧಿಕಾರಿ ಸೇರಿದಂತೆ ನಾಲ್ವರು ಅಧಿಕಾರಿಗಳ ಸಮಿತಿ ರಚಿಸಿದ್ದರು. ಸಮಿತಿಯ ತಯಾರಿಸಿದ ವರದಿಯನ್ನು ಜಿಲ್ಲಾ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸೂರ್ಯಕಾಂತ ಮದಾನೆ ಅವರಿಗೆ ಕಳುಹಿಸ ಲಾಗಿತ್ತು.

ಪ್ರಧಾನಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ ಅನುಷ್ಠಾನದಲ್ಲಿ ಕರ್ತವ್ಯ ನಿರ್ಲಕ್ಷ್ಯ ಮತ್ತು ಹಾಲಿನ ಪೌಡರ್ ಪ್ಯಾಕೆಟ್‌ಗಳನ್ನು ಶಾಲೆಯಿಂದ ಹೊರಸಾಗಿಸುವಲ್ಲಿ ಮುಖ್ಯ ಶಿಕ್ಷಕರ ಪಾತ್ರ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದರು. ವರದಿಯನ್ನು ಆಧರಿಸಿ ಡಿಡಿಪಿಐ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಅಫಜಲಪುರ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....