LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....

ಒಡಿಶಾ -

ಕರ್ತವ್ಯದ ವೇಳೆಯಲ್ಲಿ ಮದ್ಯ ಸೇವಿಸಿ ಶಾಲೆಯ ಮುಖ್ಯ ದ್ವಾರಕ್ಕೆ ಬೀಗ ಹಾಕಿ ಮಲಗಿದ್ದ ಆರೋಪದಲ್ಲಿ ಒಡಿಶಾದ ಕೇಂದ್ರಪಾರಾ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕರೊಬ್ಬರನ್ನು ಅಮಾನತುಗೊಳಿಸಲಾಗಿದೆ.

ಈ ವೇಳೆ ಸುಮಾರು 35 ವಿದ್ಯಾರ್ಥಿಗಳು ಶಾಲೆ ಯೊಳಗೆ ಸಿಲುಕಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಡೆರಾಬಿಶ್‌ ಬ್ಲಾಕ್‌ನ ಕುರುಜಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬುರಾ ಸರ್ಕಾರಿ ಪ್ರಾಥ ಮಿಕ ಶಾಲೆಯ ಮುಖ್ಯಶಿಕ್ಷಕ ಸುನಕರ್ ನಾಯಕ್ ಆರೋಪಿ.1ರಿಂದ 5ನೇ ತರಗತಿಯ ವಿದ್ಯಾರ್ಥಿಗಳು ಶಾಲೆಯೊಳಗಿದ್ದಾಗ ಮುಖ್ಯ ದ್ವಾರಕ್ಕೆ ಬೀಗ ಹಾಕಿದ್ದಾರೆ ಎನ್ನಲಾಗಿದೆ.

ಭಯಗೊಂಡ ವಿದ್ಯಾರ್ಥಿಗಳು ಕೂಗಿಕೊಂಡಿದ್ದು, ಸ್ಥಳೀ ಯರು ಶಾಲೆಯತ್ತ ಧಾವಿಸಿ ಬೀಗ ತೆರೆದು ಮಕ್ಕಳನ್ನು ಹೊರಗೆ ಕರೆತಂದಿದ್ದಾರೆ.ಮುಖ್ಯಶಿಕ್ಷಕರ ಈ ಕೃತ್ಯದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಪೋಷಕರಿಂದ ಆಕ್ರೋಶ ವ್ಯಕ್ತವಾಗಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇಲಾಖಾ ವಿಚಾರಣೆಯಲ್ಲಿ ಆರೋಪಗಳುದೃಢಪಟ್ಟಿವೆ ಎಂದು ಡೆರಾಬಿಶ್‌ ಬ್ಲಾಕ್‌ ಶಿಕ್ಷಣಾಧಿಕಾರಿ ಮದನ್ ಮೋಹನ್ ಕರ್ ತಿಳಿಸಿದ್ದಾರೆ. ಶಾಲೆಯ ಮುಖ್ಯಸ್ಥರ ಇಂತಹ ವರ್ತನೆ ಶಿಕ್ಷಕ ವೃತ್ತಿಗೆ ತಕ್ಕುದಲ್ಲ ಎಂದು ಅವರು ಹೇಳಿದ್ದಾರೆ.ಶಾಲೆಯಲ್ಲಿ ಸುಮಾರು 35 ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರಿದ್ದಾರೆ. ಮತ್ತೊಬ್ಬ ಶಿಕ್ಷಕರು ರಜೆಯಲ್ಲಿದ್ದ ಕಾರಣ ನಾಯಕ್ ಒಬ್ಬರೇ ಶಾಲೆಯಲ್ಲಿ ಇದ್ದರು ಎನ್ನಲಾಗಿದೆ.

ಸುದ್ದಿ ಸಂತೆ ನ್ಯೂಸ್ ಒಡಿಶಾ......

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....ಶಿಕ್ಷಕರ ಎರಡು ಪ್ರಮುಖ ಬೇಡಿಗಳಿಗೆ ಅಸ್ತು ಎಂದ ಇಲಾಖೆ ಮನವಿಗೆ ಸ್ಪಂದಿಸಿದ ಅಧಿಕಾರಿಗಳಿಗೆ ಧನ್ಯವಾದಗಳು ಹೇಳಿದ KSPSTA......