LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬಿಸಿಯೂಟ ಸೇವಿಸಿ ಶಿಕ್ಷಕರು ಸೇರಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು - ಆಸ್ಪತ್ರೆಯಲ್ಲಿ ಶಿಕ್ಷಕರು,ವಿದ್ಯಾರ್ಥಿಗಳಿಗೆ ಚಿಕಿತ್ಸೆ - BEO ಭೇಟಿ ಆರೋಗ್ಯ ವಿಚಾರಣೆ.....

ತುಮಕೂರು -

ಬಿಸಿಯೂಟ ಸೇವಿಸಿ ಶಿಕ್ಷಕರು ಸೇರಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಯಲ್ಲಿ ಶಿಕ್ಷಕರು,ವಿದ್ಯಾರ್ಥಿಗಳಿಗೆ ಚಿಕಿತ್ಸೆ  BEO ಭೇಟಿ ಆರೋಗ್ಯ ವಿಚಾರಣೆ ಹೌದು

ಶಾಲೆಯಲ್ಲಿ ಬಿಸಿಯೂಟವನ್ನು ಸೇವಿಸಿ ಶಿಕ್ಷಕರು ವಿದ್ಯಾರ್ಥಿಗಳು ಆಸ್ವಸ್ಥಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.ಹೌದು ಊಟ ಮಾಡಿದ ನಂತರ ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಕೂಡಾ ಅಸ್ವಸ್ಥಗೊಂಡಿದ್ದಾರೆ.ಇಬ್ಬರು ಶಿಕ್ಷಕರು ಸೇರಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯ ದಲ್ಲಿ ಏರುಪೇರಾಗಿದೆ.

ಸೀನಪ್ಪನಹಳ್ಳಿ ಗ್ರಾಮದ ಶ್ರೀ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ.ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಸೀನಪ್ಪನಹಳ್ಳಿನಲ್ಲಿರುವ ಶ್ರೀ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಈ ಒಂದು ಚಿತ್ರಣ ಕಂಡು ಬಂದಿದ್ದು ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ಮೊಸರನ್ನ ಸೇರಿಸಿದ್ದರು  ವಿದ್ಯಾರ್ಥಿ ಗಳು

https://youtu.be/6TAvniEpXr8?si=yXFvMOjsM_8Mk7cq

ನಿನ್ನೆ ರಾತ್ರಿ ವಿದ್ಯಾರ್ಥಿಗಳು ಮನೆಗೆ ಹೋದಾಗ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ರಾತ್ರೋರಾತ್ರಿ ಮಕ್ಕಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ ಪೋಷಕರು.ಕುಣಿಗಲ್ ತಾಲ್ಲೂಕಿನ ಹಿಪ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಸ್ವಸ್ಥಗೊಂಡಿರುವ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಅದರಲ್ಲಿ 12 ಮಕ್ಕಳಿಗೆ ಹೆಚ್ಚಿನ ಚಿಕಿತ್ಸೆಗೆ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಒಟ್ಟು 80 ವಿದ್ಯಾರ್ಥಿಗಳಿರುವ ಶ್ರೀ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆ ಯಲ್ಲಿ ಈ ಒಂದು ಅವಘಡ ನಡೆದಿದೆ.ಸ್ಥಳಕ್ಕೆ ಕುಣಿಗಲ್ ಟಿಹೆಚ್ ಓ ಹಾಗೂ ಆರೋಗ್ಯಾಧಿಕಾ ರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಹಲವರು ಭೇಟಿ ನೀಡಿ ಆರೋಗ್ಯ ವನ್ನು ವಿಚಾರಣೆ ಮಾಡಿದರು.

ಸಧ್ಯ ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳು ಶಿಕ್ಷಕರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು ಗಂಭೀರಗೊಂಡಿರುವ 10 ವಿದ್ಯಾರ್ಥಿಗಳಿಗೆ ಕುಣಿಗಲ್ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

https://youtu.be/be8YtfjFoVg?si=n789jHsJIw_7rtgo

 

https://youtu.be/6TAvniEpXr8?si=yXFvMOjsM_8Mk7cq

ಸುದ್ದಿ ಸಂತೆ ನ್ಯೂಸ್ ತುಮಕೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....