LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಶಿಕ್ಷಣ ಸಚಿವರು ಬೇಸಿಗೆ ರಜೆ ವಿಸ್ತರಣೆ,ಶಾಲೆಗಳ ಆರಂಭದ ಸಿದ್ದತೆ ಕುರಿತು ಮಾತನಾಡಿದ ಸಚಿವರು.....

ಬೆಂಗಳೂರು -

ಶಾಲೆಗಳಿಗೆ ಬೇಸಿಗೆ ರಜೆ ವಿಸ್ತರಣೆ ಮಾಡುವ ಸಾಧ್ಯತೆ ಎನ್ನುವ ಸುದ್ದಿಗೆ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು ಎಲ್ಲಾ ಗೊಂದಲಗಿಳಿಗೆ ತೆರೆ ಎಳೆದಿದೆ.ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಮಾತನಾಡಿ ನಿಗದಿಯಂತೆ ಮೇ 16ರಂದು ಶಾಲೆಗಳು ಆರಂಭವಾಗಲಿದೆ ಎಂದು ಸ್ಪಷ್ಟಪಡಿಸಿದರು.ನಿಗದಿತ ದಿನಾಂಕದಂದೇ ಶಾಲೆ ಆರಂಭವಾಗಲಿದ್ದು ಕಳೆದ ಎರಡು ವರ್ಷಗಳಿಂದ ಮಕ್ಕಳು ಶಾಲೆಗಳಿಂದ ಹೊರಗುಳಿದಿದ್ದಾರೆ. ಹೀಗಾಗಿ 15 ದಿನ ಮೊದಲೇ ಕಲಿಕಾ ಚೇತರಿಕೆ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಬಿಸಿಲ ತಾಪಮಾನ ಹೆಚ್ಚಾಗಿರುವುದರಿಂದ ಜೂನ್ 15ರವರೆಗೆ ರಜೆ ವಿಸ್ತರಿಸಬೇಕು ಎಂದು ಕೆಲವು ವಿಧಾನಪರಿಷತ್ ಸದಸ್ಯರು ಪತ್ರ ಬರೆದಿದ್ದರು.ಇದಕ್ಕೆ ಶಾಲಾ ಸಿಬ್ಬಂದಿ ಮತ್ತು ಶಿಕ್ಷಣ ತಜ್ಞರು ವಿರೋಧ ವ್ಯಕ್ತಪಡಿ ಸಿದ್ದರು.ಈಗ ಶಿಕ್ಷಣ ಸಚಿವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ

ಕೋವಿಡ್‍ನಿಂದಾಗಿ ಕಳೆದ ಎರಡೂವರೆ ವರ್ಷಗಳಿಂದ ಶಾಲೆಗಳಲ್ಲಿ ಸರಿಯಾಗಿ ಭೌತಿಕ ತರಗತಿಗಳು ನಡೆದಿಲ್ಲ. ವಿದ್ಯಾರ್ಥಿಗಳು ಸಹ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಹೀಗಾಗಿ ಶೈಕ್ಷಣಿಕ ವರ್ಷವನ್ನು ಮೇ 16ರಿಂದ ಪ್ರಾರಂಭಿ ಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.ಹೀಗಾಗಿ ಅಂದಿನಿಂದ ಲೇ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾ ಗಿದೆ.ಎರಡು ಶೈಕ್ಷಣಿಕ ವರ್ಷ ವಿದ್ಯಾರ್ಥಿಗಳ ಕೌಶಲ್ಯವನ್ನೇ ಕಸಿದುಕೊಂಡಿದೆ.ಇದರಿಂದಾಗಿ ಕಲಿಕಾ ಚೇತರಿಕೆಯ ಕಾರ್ಯಕ್ರಮದ ಮಹತ್ವವನ್ನು ಪೋಷಕರಿಗೆ ಮನವರಿಕೆ ಮಾಡಿಕೊಡುವ ಮೂಲಕ ವಿದ್ಯಾರ್ಥಿಗಳನ್ನು ಶಾಲೆಯ ಕೊಠಡಿಗಳಿಗೆ ಬರುವಂತೆ ಮಾಡುವುದು ಹಾಗೂ ಮಕ್ಕಳ ಕಲಿಕೆಯ ನ್ಯೂನ್ಯತೆಯನ್ನು ಪತ್ತೆ ಮಾಡಿ ಉತ್ತಮ ಶಿಕ್ಷಣ ನೀಡಬೇಕಾಗಿದೆ. ಹೀಗಾಗಿ ಮೇ 16ರಿಂದ ಶಾಲೆಗಳು ಪ್ರಾರಂಭವಾಗಲಿದೆ ಎಂದರು.ಮಕ್ಕಳ ಕಲಿಕಾ ಹಂತವನ್ನು ಸರಿದೂಗಿಸಲು,ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ವರ್ಷದ ಪ್ರಕ್ರಿಯೆ ಸುಗಮವಾಗಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮ ಉಪಯೋಗಕಾರಿಯಾಗಲಿದೆ ಎಂಬುದು ಶಿಕ್ಷಣ ಇಲಾಖೆಯ ಅಭಿಪ್ರಾಯವಾಗಿದೆ ಎಂದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....