LIVE TV LocalCrimeNationalInternationalPoliticsEducationTechnologyEntertainmentSportsFeature
National News

ಶಿಕ್ಷಕಿ ಮೇಲೆ ದೂರು ದಾಖಲು - ಗೊಂದಲದಲ್ಲಿ ಪೊಲೀಸರು.....

ಉತ್ತರ ಪ್ರದೇಶ -

ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡುವಂತೆ ಹಿಂದು ವಿದ್ಯಾರ್ಥಿಗಳಿಗೆ ಶಿಕ್ಷಕಿಯೊಬ್ಬರು ಆದೇಶಿಸಿದ ಭಯಾನಕ ವಿಡಿಯೋವೊಂದು ವೈರಲ್ ಆಗಿದ್ದು ಇದೀಗ ಆ ಖಾಸಗಿ ಶಾಲೆಯ ಶಿಕ್ಷಕಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಇಂತಹ ಪ್ರಕರಣದಲ್ಲಿ ಪೊಲೀಸರು ವಾರಂಟ್ ಇಲ್ಲದೆ ಆರೋಪಿಯನ್ನು ಬಂಧಿಸುವಂತಿಲ್ಲ.

ತನಿಖೆ ಆರಂಭಿಸಲು ಪೊಲೀಸರಿಗೆ ನ್ಯಾಯಾಲ ಯದ ಅನುಮತಿ ಬೇಕಾಗುತ್ತದೆ. ಸಂತ್ರಸ್ತಮಗು ವಿನ ಪೋಷಕರು ಪ್ರಕರಣವನ್ನು ಮುಂದುವ ರಿಸಲು ನಿರಾಕರಿಸಿದ ಒಂದು ದಿನದ ನಂತರ ಅಂದರೆ ಶನಿವಾರ ದೂರು ನೀಡಿದ್ದು ಅದರ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 (ಸ್ವಯಂಪ್ರೇರಿ ತವಾಗಿ ನೋವುಂಟು ಮಾಡಿದ ಶಿಕ್ಷೆ) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶ ದಿಂದ ಉದ್ದೇಶಪೂರ್ವಕ ಅವಮಾನ) ಅಡಿ ಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ ನಲ್ಲಿ ಈ ಘಟನೆ ನಡೆದಿದೆ.ಘಟನೆಯ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಬಲವಾಗಿ ಹೊಡೆಯುವಂತೆ ಒತ್ತಾಯಿಸುವುದನ್ನು ಮತ್ತು ಸಂತ್ರಸ್ತ ಬಾಲಕ ಅವಮಾನದಿಂದ ಅಳುವುದನ್ನು ಕಾಣಬಹುದು.

ನೇಹಾ ಪಬ್ಲಿಕ್ ಸ್ಕೂಲ್‌ನ ತ್ರಿಪ್ತ ತ್ಯಾಗಿ ಎನ್ನುವ ಶಿಕ್ಷಕಿ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಹಿಂದೂ ವಿದ್ಯಾರ್ಥಿಗಳಿಂದ ಥಳಿಸಲು ಒತ್ತಾಯಿ ಸಸಿದ್ದಾರೆ ಮುಂದೇನು ಆಗಲಿದೆ ಎಂಬೊಂದನ್ನು ಕಾದು ನೋಡಬೇಕಿದೆ.

ಸುದ್ದಿ ಸಂತೆ ನ್ಯೂಸ್ ಉತ್ತರ ಪ್ರದೇಶ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....