LIVE TV LocalCrimeNationalInternationalPoliticsEducationTechnologyEntertainmentSportsFeature
State News

ನಾಳೆಯಿಂದ ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಆರಂಭ ನಾಳೆ ಯಿಂದ ಪ್ರಕ್ರಿಯೆ ಆರಂಭ.....

ಬೆಂಗಳೂರು -

ರಾಜ್ಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2022-23ನೇ ಸಾಲಿನ ದಾಖಲಾತಿ ಆಧಾರದ ಮೇಲೆ ಹೆಚ್ಚುವರಿಯಾಗಿರುವ ಶಿಕ್ಷಕರನ್ನು ಗುರುತಿಸಿ ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಮರು ಹೊಂದಾಣಿಕೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ನಾಳೆಯಿಂದ ಪ್ರಕ್ರಿಯೆ ಆರಂಭವಾಗಲಿದೆ.

ಜೂ.18 ರಿಂದ ಜು.6ರೊಳಗೆ ಹೊಂದಾಣಿಕೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಎಲ್ಲ ಜಿಲ್ಲೆಗಳ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ ವಿಶಾಲ್‌ ಸುತ್ತೋಲೆ ಹೊರಡಿಸಿ ದ್ದಾರೆ.

ಜೂ.15ರಂದು ಹೆಚ್ಚುವರಿ ಮುಖ್ಯ ಶಿಕ್ಷಕರು,ಸಹ ಶಿಕ್ಷಕರು, ವಿಶೇಷ ಶಿಕ್ಷಕರ ತಾಲ್ಲೂಕು, ಜಿಲ್ಲೆ, ಶಾಲಾವಾರು ತಾತ್ಕಾಲಿಕ ಆದ್ಯತಾ ಪಟ್ಟಿಯನ್ನು ಇಲಾಖಾ ತಂತ್ರಾಂಶದಲ್ಲಿ ಡಿಡಿಪಿಐ ಗಳಿಗೆ ಬಿಡುಗಡೆ ಮಾಡಲಾಗಿದೆ.ಆ ಪಟ್ಟಿಗೆ ತಮ್ಮ ಜಿಲ್ಲೆ, ತಾಲ್ಲೂಕು ಹಂತದಲ್ಲಿ ಶಿಕ್ಷಕರಿಂದ ಆಕ್ಷೇಪಣೆಗಳನ್ನು ಸ್ವೀಕರಿಸಿ ಕೇಂದ್ರ ಕಚೇರಿಗೆ ಜೂ.18ರೊಳಗೆ ಸಲ್ಲಿಸಬೇಕು. ನಂತರ ಆಕ್ಷೇಪಣೆಗಳನ್ನು ಪರಿಶೀಲಿಸಿ ಜೂ.23ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

ಈ ಪಟ್ಟಿಯ ಆಧಾರದಲ್ಲಿ ಡಿಡಿಪಿಐ,ಬಿಇಒಗಳು ಜೂ.28 ರೊಳಗೆ ತಾಲ್ಲೂಕಿನೊಳಗೆ,ಜೂ.30ರೊಳಗೆ ಜಿಲ್ಲೆಯ ಒಳಗೆ ಜು.2ರೊಳಗೆ ವಿಭಾಗದೊಳಗೆ(ಜಿಲ್ಲೆಯ ಹೊರಗೆ) ಜು.4ರೊಳಗೆ ಅಂತರ್‌ ವಿಭಾಗ ಮಟ್ಟದಲ್ಲಿ ಶಿಕ್ಷಕರು ಮರು ಹೊಂದಾಣಿಕೆ ಪ್ರಕ್ರಿಯೆ ಪೂರ್ಣಗೊಳಿಸಿ ಪೂರ್ಣ ಮಾಹಿತಿ ಯನ್ನು ಕೇಂದ್ರ ಕಚೇರಿಗೆ ಜು.6ರೊಳಗೆ ಸಲ್ಲಿಸಬೇಕೆಂದು ಆಯುಕ್ತರು ಸೂಚಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....