LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕ ಅಮಾನತಿಗೆ ವಿರೋಧ ಮುಂದುವರೆದ ಪ್ರತಿಭಟನೆ - ಶಾಲೆಯ ಮುಂದೆ ನಿರಂತರವಾಗಿ ನಡೆಯುತ್ತಿದೆ ಹೋರಾಟ.....ಶಾಲೆಗೆ ಬಾರದ ವಿದ್ಯಾರ್ಥಿಗಳು.....

ಯಳಂದೂರು -

ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಗಳಿದ್ದ ಬಸ್ಸನ್ನು ಚಲಾಯಿಸಿದರೆಂಬ ಕಾರಣಕ್ಕೆ ಅಮಾನತಾಗಿರುವ ಗುಂಬಳ್ಳಿ ಪ್ರೌಢಶಾಲೆಯ ಶಿಕ್ಷಕ ಎಂ. ವೀರಭದ್ರಸ್ವಾಮಿ ಅವರ ಅಮಾನತು ಆದೇಶವನ್ನು ಹಿಂಪಡೆಯಬೇಕು, ಕೂಡಲೇ ಶಾಲೆಗೆ ಬರಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ನಡೆಸುತ್ತಿರುವ ಪ್ರತಿಭಟನೆ  ದಿನವೂ ಮುಂದುವರಿದಿದೆ

ವಿದ್ಯಾರ್ಥಿಗಳು  ಶಾಲೆಗೆ ಹಾಜರಾಗಲಿಲ್ಲ.ಡಿಡಿಪಿಐ ರಾಮಚಂದ್ರ ರಾಜೇ ಅರಸ್‌ ಶಾಲೆಗೆ ಭೇಟಿ ನೀಡಿ ದ್ದರು.ಎಸ್‌ಡಿಎಂಸಿ ಅಧ್ಯಕ್ಷ ರಾಜಣ್ಣ ಸದಸ್ಯರು ಹಾಗೂ ಪೋಷಕರು ಮತ್ತು ಗ್ರಾಮಸ್ಥರು ಹಾಜರಿದ್ದರು. ಏಕಾಏಕಿ ವೀರಭದ್ರಸ್ವಾಮಿರನ್ನು ಅಮಾನತು ಮಾಡಿರುವ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ

ಆದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಡಿಡಿಪಿಐ ನೀಡಿದರೂ ಪ್ರತಿಭಟನಕಾರರು ಈ ಬಗ್ಗೆ ಲಿಖಿತವಾಗಿ ತಿಳಿಸುವಂತೆ ಪಟ್ಟು ಹಿಡಿದರು. ಇದು ಸಾಧ್ಯವಿಲ್ಲ ಎಂದಾಗ ವಾಗ್ವಾದ ನಡೆಯಿತು. ವಿದ್ಯಾರ್ಥಿ ನಿಯೊಬ್ಬಳು ಡಿಡಿಪಿಐ ಮುಂದೆ ಅಳುತ್ತ ಅಸ್ವಸ್ಥಳಾಗಿ ಕುಸಿದ ಘಟನೆಯೂ ನಡೆಯಿತು.

ಪ್ರವಾಸದ ವೇಳೆ ಚಾಲಕ ಅಸೌಖ್ಯಕ್ಕೊಳಗಾದ ಕಾರಣ ಪ್ರವಾಸವನ್ನು ರದ್ದುಪಡಿಸುವುದು ಬೇಡವೆಂದು ಶಿಕ್ಷಕ ವೀರಭದ್ರಸ್ವಾಮಿ ಬಸ್‌ ಚಲಾಯಿಸಿದ್ದರು

 

ಸುದ್ದಿ ಸಂತೆ ನ್ಯೂಸ್ ಯಳಂದೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....