LIVE TV LocalCrimeNationalInternationalPoliticsEducationTechnologyEntertainmentSportsFeature
International News

ಸುರಂಗದಲ್ಲಿ ಸಿಲುಕಿಕೊ‌ಂಡಿದ್ದ 16 ಕಾರ್ಮಿಕರ ರಕ್ಷಣೆ - ಮುಂದುವರಿದ ಕಾರ್ಯಾಚರಣೆ

ಚಮೋಲಿ(ಉತ್ತರಾಖಂಡ)

ಚಮೋಲಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪರ್ವತ ಕುಸಿದು ಡ್ಯಾಂ ಒಡೆದ ಪರಿಣಾಮ ಉಂಟಾದ ಅನಾಹುತಕ್ಕೆ 10 ಮಂದಿ ಬಲಿಯಾಗಿದ್ದು ಇದೇ ವೇಳೆ ಸುರಂಗದಲ್ಲಿ ಸಿಲುಕಿದ್ದ 16 ಮಂದಿಯನ್ನು ಐಟಿಬಿಪಿ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಹಿಮ ಪ್ರವಾಹದಲ್ಲಿ ಬರೋಬ್ಬರಿ 150 ಮಂದಿ ನಾಪತ್ತೆಯಾಗಿದ್ದು ಪ್ರಸ್ತುತ ಹತ್ತು ಮೃತದೇಹಗಳು ಸಿಕ್ಕಿರುವುದಾಗಿ ರಕ್ಷಣಾ ತಂಡಗಳು ತಿಳಿಸಿವೆ. ಉತ್ತರಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಘೋಷಿಸಿದ್ದಾರೆ. ಇದರ ಜೊತೆಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡಿ ರುವವರಿಗೆ ತಲಾ 50 ಸಾವಿರ ರುಪಾಯಿ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಇವೆಲ್ಲದರ ನಡುವೆ ಚಮೋಲಿ ಜಿಲ್ಲೆಯ ತಪೋವನ ಪ್ರದೇಶದಲ್ಲಿರುವ ಸುರಂಗದಲ್ಲಿ ಸಿಲುಕಿದ್ದ 16 ಕಾರ್ಮಿಕರನ್ನು ಇಂಡೋ-ಟಿಬೆಟಿಯನ್ ಪೊಲೀಸರು ರಕ್ಷಿಸಿದ್ದು ಇನ್ನೂ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ‌‌

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....