LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹೆಂಡತಿ ಮಗಳನ್ನು ನೋಡಲು ಬಂದವ ಹೆಣವಾದ – ಅಂಚಟಗೇರಿ ನಡೆದಿದ್ದೇನು ಗೋತ್ತಾ

ಹುಬ್ಬಳ್ಳಿ-

ಕಲ್ಲಿನಿಂದ ಜಜ್ಜಿ ಯುವನಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಅಂಚಟಗೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೌರಗುಡ್ಡ ಹೋಗುವ ರಸ್ತೆಯಲ್ಲಿ ಕೊಲೆ ಮಾಡಲಾಗಿದೆ.ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಚೌರಗುಡ್ಡಗೆ ಹೊಗುವ ರಸ್ತೆಯಲ್ಲಿ ಘಟನೆ ಈ ಒಂದು ಭೀಕರ ಕೊಲೆ ನಡೆದಿದೆ.

ಜಗದೀಶ ಮನೋಹರ ಕೊಲ್ಲಾಪೂರ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಹಾವೇರಿ ಜಿಲ್ಲೆಯ ಹಾನಗಲ್ಲ್ ನಿವಾಸಿಯಾಗಿರುವ ಜಗದೀಶ್ ಮನೋಹರ ಕೊಲ್ಲಾಪೂರ ಪತ್ನಿಯ ಊರು ಅಂಚಟಗೇರಿ ಗ್ರಾಮ. ಕಳೆದ ನಾಲ್ಕು ತಿಂಗಳ ಹಿಂದೆ ಹೆರಿಗೆಯಾಗಿ ತವರು ಮನೆಯಲ್ಲಿರುವ ಜಗದೀಶ್ ತನ್ನ ಹೆಂಡತಿ ಮಗಳನ್ನು ನೋಡಿಕೊಂಡು ಹೋಗಲು ಬಂದಿದ್ದನು. ನಿನ್ನೇ ಹಾವೇರಿಯ ಹಾನಗಲ್ಲ್ ಬಂದು ಇವತ್ತು ಮರಳಿ ಊರಿಗೆ ಹೋಗುವ ಯೋಚನೆಯಲ್ಲಿದ್ದನು ಜಗದೀಶ್. ಹೆಂಡತಿ ಮಗಳನ್ನು ನೋಡಿದ್ದಾನೊ ಇಲ್ಲ ಇವನಂಥೂ ರಸ್ತೆಯಲ್ಲಿ ಹೆಣವಾಗಿ ಬಾರದ ಲೋಕಕ್ಕೇ ಹೋಗಿದ್ದಾನೆ. ಚೌರಗುಡ್ಡ ರಸ್ತೆಯ ಪಕ್ಕದಲ್ಲಿ ಕಲ್ಲಿನಿಂದ ತಲೆಗೆ ಜಜ್ಜಿ ಭೀಕರವಾಗಿ ಜಗದೀಶ ನನ್ನು ಕೊಲೆ ಮಾಡಲಾಗಿದೆ.

ಕೊಲೆಯಾದ ವಿಷಯ ತಿಳಿದ ಹುಬ್ಬಳ್ಳಿ ಗ್ರಾಮೀಣ ಇನಸ್ಪೇಕ್ಟರ್ ರಮೇಶ ಗೋಕಾಕ ತಮ್ಮ ಸಿಬ್ಬಂದ್ದಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಕೊಲೆಯನ್ನು ಯಾತಕ್ಕಾಗಿ ಮಾಡಿದ್ದಾರೆ ಯಾರು ಮಾಡಿದ್ದಾರೆ ಹೀಗೆ ಎಲ್ಲಾ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.ಸ್ಥಳದಲ್ಲಿ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆ ಸಿಬ್ಬಂದಿ ಗಳಾದ ಡೇವಿಡ್ ಸೇರಿದಂತೆ ಹಲವರು ಇದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....