LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ನಾಳೆಯಿಂದ ಶಿಕ್ಷಕರ ವರ್ಗಾವಣೆ ಆರಂಭ - ಯಾವ ಯಾವ ದಿನ ಯಾರು ಯಾರ ವರ್ಗಾವಣೆ ಕಂಪ್ಲೀಟ್ ಮಾಹಿತಿ.....

ಬೆಂಗಳೂರು -

ನಾಳೆಯಿಂದ ರಾಜ್ಯಾದ್ಯಂತ ಮತ್ತೊಂದು ಹಂತದಲ್ಲಿ ಶಿಕ್ಷಕರ ವರ್ಗಾವಣೆ ನಡೆಯಲಿದ್ದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ ಗಳಲ್ಲಿ ಈ ಒಂದು ಪ್ರಕ್ರಿಯೆ ನಡೆಯಲಿದ್ದು ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆಯು ಎಲ್ಲಾ ವ್ಯವಸ್ಥೆ ಗಳನ್ನು ಮಾಡಿಕೊಂಡಿದ್ದು ವಿಭಾಗದ ಗ್ರೂಪ್-'ಬಿ' ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರ,ತತ್ಸಮಾನ ವೃಂದ ದವರು ಪ್ರಥಮ ಅಧಿಸೂಚನೆಯನ್ವಯ ವರ್ಗಾವಣೆಗೆ ಅರ್ಜಿ ಸಲ್ಲಿಸಿದ ಗ್ರೂಪ್-'ಬಿ' ವೃಂದದ ಅಧಿಕಾರಿಗಳ ವರ್ಗಾವಣೆ ಕೌನ್ಸೆಲಿಂಗ್ ಇದೇ 16, 17ರಂದು ನಡೆಯ ಲಿದೆ.ವಿಭಾಗದೊಳಗಿನ ಕೋರಿಕೆ ವರ್ಗಾವಣೆಗಳ ಮತ್ತು ನಿರ್ದಿಷ್ಟಪಡಿಸಿದ ಹುದ್ದೆಗಳಲ್ಲಿ ಕನಿಷ್ಠ ಸೇವೆ (3 ವರ್ಷ ಮೇಲ್ಪಟ್ಟು ಮತ್ತು 5 ವರ್ಷ ಒಳಗೆ) ಇರುವ ಅಧಿಕಾರಿ ಗಳಿಗೆ ಅನುಕ್ರಮವಾಗಿ 16, 17ರಂದು ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕೌನ್ಸೆಲಿಂಗ್ ಹಮ್ಮಿಕೊಳ್ಳಲಾಗಿದೆ

ಸಂಬಂಧಿಸಿದ ಅಧಿಕಾರಿಗಳು ಆಯುಕ್ತರ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ಕೌನ್ಸೆಲಿಂಗ್‌ಗೆ ಹಾಜರಾಗಿ ಸ್ಥಳ ಆಯ್ಕೆ ಮಾಡಿಕೊಳ್ಳಬಹುದು.

ಇನ್ನೂ ಗ್ರೂಪ್-ಬಿ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರ, ತತ್ಸಮಾನ ವೃಂದದ ಅಧಿಕಾರಿಗಳ ಅಂತಿಮ ಆದ್ಯತಾ ಪಟ್ಟಿಯನ್ನು ರಾಜ್ಯದ ಇಲಾಖೆಯ ವೆಬ್‌ಸೈಟ್ ನಲ್ಲಿ ‍ಪ್ರಕಟಿಸಲಾಗಿದೆ

ಸ್ಥಳ ಆಯ್ಕೆಗೆ ದಿನಾಂಕ ನಿಗದಿ ವಿಭಾಗದ ಘಟಕದೊಳಗಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರು,ದೈಹಿಕ ಶಿಕ್ಷಣ ಶಿಕ್ಷಕರು- ಗ್ರೇಡ್-2/ ವಿಶೇಷ ಶಿಕ್ಷಕರು ಹಾಗೂ ಪ್ರೌಢಶಾಲಾ ಸಹಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು/ ವಿಶೇಷ ಶಿಕ್ಷಕ ವೃಂದದ ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಸಂಬಂಧ ಅಂತಿಮ ಆದ್ಯತಾ ವರ್ಗಾವಣೆ ಪಟ್ಟಿಯಲ್ಲಿರುವವರಿಗೆ ಸ್ಥಳ ಆಯ್ಕೆ ಪ್ರಕ್ರಿಯೆಯುಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರ ಕಚೇರಿಯಲ್ಲಿ ನಡೆಯಲಿದೆ.

ಡಿ. 16: ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ದೈಹಿಕ ಶಿಕ್ಷಕರು ಗ್ರೇಡ್-2 ಪರಸ್ಪರ ವರ್ಗಾವಣೆ.

ಡಿ. 21: ಪರಸ್ಪರ ವರ್ಗಾವಣೆ ಪ್ರೌಢ ಶಾಲಾ ವಿಭಾಗ ಸಹ ಶಿಕ್ಷಕರು ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹಾಗೂ ವಿಶೇಷ ಶಿಕ್ಷಕರು

ಕೋರಿಕೆ ವರ್ಗಾವಣೆ: ಡಿ.20ಕ್ಕೆ ಸಹಶಿಕ್ಷಕರು,ಸಹ ಶಿಕ್ಷಕರು ಡಿ. 22ಕ್ಕೆ ದೈಹಿಕ ಶಿಕ್ಷಣ ಶಿಕ್ಷಕರು, ಗ್ರೇಡ್-1 ವಿಶೇಷ ಶಿಕ್ಷಕರು

ಪರಸ್ಪರ ವರ್ಗಾವಣೆ: ಸಹಶಿಕ್ಷಕರು ದೈಹಿಕ ಶಿಕ್ಷಕರು ವಿಶೇಷ ಶಿಕ್ಷಕರು,ವರ್ಗಾವಣೆ ಕೌನ್ಸಲಿಂಗ್ ಹಾಜರಾಗುವ ಶಿಕ್ಷಕ ವೃಂದದವರು ದಾಖಲೆಗಳೊಂದಿಗೆ ಹಾಜರಾಗಲು ಸೂಚಿಸಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....