LIVE TV LocalCrimeNationalInternationalPoliticsEducationTechnologyEntertainmentSportsFeature
State News

ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಸರ್ಕಾರಿ ನೌಕರರು.....40K ತಗೆದುಕೊಳ್ಳುವಾಗ ಲಾಕ್.....

ಗಂಗಾವತಿ -

40 ಸಾವಿರ ಲಂಚ ಸ್ವೀಕರಿಸುವ ವೇಳೆ ಇಬ್ಬರು ಸರ್ಕಾರ ನೌಕರರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕೊಪ್ಪಳ ದ ಗಂಗಾವತಿ ಯಲ್ಲಿ ನಡೆದಿದೆ ಜಮೀನಿನ ಉತಾರ ಮಾಡಿಕೊಡಲು ₹40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಆಡಳಿತಾಧಿಕಾರಿ (VA) ಹಾಗೂ ಗ್ರಾಮ ಸಹಾಯಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಗಂಗಾವತಿ ತಾಲೂಕಿನ ಅಂಜನಹಳ್ಳಿ ಗ್ರಾಮದ ಈಶ್ವರ ಶ್ರೀರಾಮು ಎಂಬುವವರು ವಿಲ್ ಮೂಲಕ ತಮ್ಮ ಹೆಸರಿಗೆ ಬಂದಿದ್ದ ಜಮೀನಿನ ಉತಾರವನ್ನು ಮಾಡಿಸಿ ಕೊಳ್ಳಲು ಗಂಗಾವತಿ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು.

ಈ ಕೆಲಸ ಮಾಡಿಕೊಡಲು ಸಂಗಾಪುರದ ಗ್ರಾಮ ಆಡಳಿತಾಧಿಕಾರಿ ಸೋಮನಾಥ ಟಿ. ಹಾಗೂ ಗ್ರಾಮ ಸಹಾಯಕ ಹನುಮೇಶ್, ತಂದೆ ಬಂಡಿ ಅಂಜನೇಯ ಎಂಬುವವರು ಸೇರಿ ₹40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಈಶ್ವರ ಶ್ರೀರಾಮು ಅವರು ಅಕ್ಟೋಬರ್ 5ರಂದು ಕೊಪ್ಪಳ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ದೂರು ಸ್ವೀಕರಿಸಿದ ಲೋಕಾಯುಕ್ತ ಅಧಿಕಾರಿಗಳು ಆರೋಪಿಗಳನ್ನು ಬಲೆಗೆ ಬೀಳಿಸಲು ಕಾರ್ಯಾಚರಣೆ ರೂಪಿಸಿದ್ದರು.

ಅದರಂತೆ ಅಕ್ಟೋಬರ್ 6ರಂದು ಮಧ್ಯಾಹ್ನ ಸುಮಾರು 12.40ರ ವೇಳೆಗೆ ಆನೆಗೊಂದಿಯ ಪೆಟ್ರೋಲ್ ಬಂಕ್ ಬಳಿ ₹40 ಸಾವಿರ ಲಂಚದ ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ಯಲ್ಲಿ ಗ್ರಾಮ ಆಡಳಿತಾಧಿಕಾರಿ ಸೋಮನಾಥ ಟಿ. ಹಾಗೂ ಗ್ರಾಮ ಸಹಾಯಕ ಹನುಮೇಶ್ ಇಬ್ಬರೂ ಸಿಕ್ಕಿಬಿದ್ದಿದ್ದು, ಲಂಚದ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕರ್ನಾಟಕ ಲೋಕಾಯುಕ್ತ ರಾಯಚೂರು ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕ ವಿಜಯ ಬಿರಾದಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಸುನೀಲ್ ಮೇಗಲಮನಿ ಹಾಗೂ ಶೈಲಾ ಎಸ್. ಪ್ರಾಟೀಕರ್ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಜಮೀನಿನ ಉತಾರ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಇಬ್ಬರನ್ನೂ ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ಪ್ರಕರಣದ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಗಂಗಾವತಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ DDPI ವರ್ಗಾವಣೆ.....ಆಡಳಿತ ಯಂತ್ರಕ್ಕೆ ಭರ್ಜರಿ ಸರ್ಜರಿ.....ಬೆಂಗಳೂರಿನಲ್ಲೂ ಬಿಗ್ ಮಿಶ್ರಾ ಹವಾ..... ಜಯನಗರದಲ್ಲಿ ಗ್ರಾಹಕರ ಅಚ್ಚುಮೆಚ್ಚಿನ ಬಿಗ್ ಮಿಶ್ರಾ.....ಕೇಂದ್ರ ಸರ್ಕಾರಿ ನೌಕರರಿಗೆ ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ......ಅನುಮೋದನೆ ನೀಡಿದ ಸಚಿವ ಸಂಪುಟಶಿಕ್ಷಕ‌ನ ಕಿರುಕುಳ ಪತ್ನಿ ಆತ್ಮಹತ್ಯೆ..... ಕಳೆದ ಮೂರು ವರ್ಷಗಳಿಂದ ಮದುವೆಯಾಗಿದ್ದ ದಂಪತಿಗಳು.....3 ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.....ಅರ್ನಬ್ ಅಬ್ಬರಕ್ಕೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮ.....ಶಿಕ್ಷಕರ ಕ್ಷೇತ್ರದಲ್ಲಿ ರಂಗನಾಥ್‌ ಗೆಲುವು.....ಪುಟ್ಟಣ್ಣ ಗೆ ಸೋಲಿನ‌ ರುಚಿ ತೋರಿಸಿದ ಮತದಾರರು.....ಸಂಕಷ್ಟದಲ್ಲಿ ಸರ್ಕಾರಿ ಅಧಿಕಾರಿ.....ವಿಡಿಯೋ ಹಾಕಿ ಎಡವಟ್ಟು ಮಾಡಿಕೊಂಡ ಅಧಿಕಾರಿ.....ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಕ..... ಸ್ವಂತ ಖರ್ಚಿನಲ್ಲಿ ವಿಮಾನಯಾನ ಮಾಡಿಸಿದ ಶಿಕ್ಷಕ ಮುಹಮ್ಮದ್ ರಫಿ ಕಾರ್ಯಕ್ಕೆ ಮೆಚ್ಚುಗೆ.....ಸರ್ಕಾರಿ ನೌಕರ ಆತ್ಮಹತ್ಯೆ....ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ನೌಕರ.....ಮಾಜಿ ಶಿಕ್ಷಣ ಸಚಿವ ಬಂಧನ..... ಶಾಲೆಗಳ ಅನುಮತಿ ನೀಡುವ 100 ಕೋಟಿ ವಂಚನೆ ಕೇಸ್​ನಲ್ಲಿ ಲಾಕ್.....