LIVE TV LocalCrimeNationalInternationalPoliticsEducationTechnologyEntertainmentSportsFeature
State News

ಇಬ್ಬರು ಶಿಕ್ಷಕರು ಅಮಾನತು - ಅಮಾನತು ಮಾಡಿದ DDPI.....

ರಾಮನಗರ -

ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯ ಕೂಡಲು ಕತ್ತರಿಸಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿದ ಘಟನೆ ರಾಮನಗರ ದಲ್ಲಿ ನಡೆದಿದೆ ಸರ್ಕಾರಿ ಶಾಲೆಯ ಶಿಕ್ಷಕರಿಬ್ಬರು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ್ದಾರೆ.

ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ.ಪವಿತ್ರ ಹಾಗೂ ಶಿವಕುಮಾರ್ ಎಂಬ ಶಿಕ್ಷಕರು ವಿದ್ಯಾರ್ಥಿ ನಿಯರ ಮೇಲೆ ದರ್ಪ ತೋರಿದ್ದಾರೆ.ಹೆಣ್ಮಕ್ಕಳ ತಲೆಗೂದಲು ಕಟ್ ಮಾಡುವುದು ಯಾವ ಸಂಸ್ಕೃತಿ ಸ್ವಾಮಿ ಎಂದು ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

ವಿದ್ಯಾರ್ಥಿನಿಯರು ಪ್ರತಿನಿತ್ಯ ಒಂದು ಜಡೆ ಹಾಕಿಕೊಂಡು ಬರುತ್ತಿದ್ದರು ಹಾಗಾಗಿ ಕೂದಲು ಕಟ್ ಮಾಡಿದ್ದವಿ ಎಂದು ಸಮಜಾಯಿಷಿಯನ್ನು ನೀಡಿದ್ದಾರೆ.ಚನ್ನಪಟ್ಟಣ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಮರಿಗೌಡ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಈ ಘಟನೆ ಬಗ್ಗೆ ಮೇಲಾಧಿಕಾರಿಗೆ ಪತ್ರ ಬರೆದು, ಅತಿಥಿ ಶಿಕ್ಷಕರಾದ ಶಿವಕುಮಾರ್ ಹಾಗೂ ಪವಿತ್ರ ಅವರಿಗೆ ಅಮಾನತು ಆದೇಶಕ್ಕೆ ರಾಮನಗರ ಜಿಲ್ಲಾ ಡಿಡಿಪಿಐ ಬಸವರಾಜೇಗೌಡಗೆ ವರದಿ ಸಲ್ಲಿಸಿದ್ದಾರೆ. ಘಟನೆ ಬಗ್ಗೆ ಸಂಪೂರ್ಣ ವಿವರಣೆ ಮೂಲಕ ವರದಿ ಸಲ್ಲಿಸಿದ್ದು, ಕೂಡಲೇ ಇಬ್ಬರು ಅತಿಥಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ರಾಮನಗರ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....