LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಉಮೇಶ್ ಕತ್ತಿ ಕುಟುಂಬಕ್ಕೆ ಸಾಂತ್ವನ ಹೇಳಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ - ಬಿಡುವಿಲ್ಲದ ಕಾರ್ಯಕ್ರಮ ಗಳ ನಡುವೆಯೂ ಆಗಮಿಸಿ ಶೃದ್ದಾಂಜಲಿ ಅರ್ಪಿಸಿ ಕುಟುಂಬಸ್ಥರಿಗೆ ಸಾಂತ್ವನ.....

ಬೆಲ್ಲದ ಬಾಗೇವಾಡಿ -

ನಿಧನರಾದ ಕರ್ನಾಟಕ ರಾಜ್ಯ ಸರಕಾರದ ಹಿರಿಯ ಸಚಿವರಾದ ಉಮೇಶ ಕತ್ತಿ ನಿವಾಸಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ದೆಹಲಿಯ ಪ್ರವಾಸದಲ್ಲಿ ಇದ್ದರೂ ಕೂಡಾ ಸುದ್ದಿ ತಿಳಿದ ಕೇಂದ್ರ ಸಚಿವರು ಮಧ್ಯರಾತ್ರಿ ಆಗಮಿಸಿ ಬೆಲ್ಲದ ಬಾಗೇವಾಡಿ ಗ್ರಾಮಕ್ಕೆ ತೆರಳಿ ಮೊದಲು ಉಮೇಶ್ ಕತ್ತಿ ಅವರ ಭಾವಚಿತ್ರ ಕ್ಕೆ ಶೃದ್ದಾಂಜಲಿ ಸಲ್ಲಿಸಿದರು

ನಂತರ ಉಮೇಶ ಕತ್ತಿ ಅವರ ಸಹೋದರ ಮತ್ತು ಕುಟುಂಬದ ರೊಂದಿಗೆ ಮಾತುಕತೆ ನಡೆಸಿದರು ಇದೇ ವೇಳೆ ಅತ್ಯಂತ ಆತ್ಮೀಯರಾಗಿದ್ದ ಉಮೇಶ್ ಕತ್ತಿ ಅವರ ಕುರಿತು ಒಡನಾಟವನ್ನು ಹಂಚಿಕೊಂಡರು ಸ್ವಗ್ರಾಮ ಬೆಲ್ಲದ ಬಾಗೇವಾಡಿಯ ಮನೆಗೆ ಭೇಟಿ ನೀಡಿ ಶ್ರದ್ಧಾಂಜಲಿ ಅರ್ಪಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು

ಬೆಳಗಾವಿ ಜಿಲ್ಲೆಯ ಮತ್ತು ಸಮಗ್ರ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಕತ್ತಿಯವರ ಕೊಡುಗೆ ಎಂದಿಗೂ ಮರೆಯುವಂತಿಲ್ಲ.ನೇರ ನಿಷ್ಠುರ ನುಡಿಯ ಕತ್ತಿಯವರ ಅಗಲುವಿಕೆ ಈ ಭಾಗದ ಜನರಿಗೆ ಮತ್ತು ಪಕ್ಷಕ್ಕೆ ತುಂಬಲಾ ರದ ನಷ್ಟವಾಗಿದೆ ಎಂದರು.ಕೇಂದ್ರ ಸಚಿವರೊಂದಿಗೆ ಆಪ್ತ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ್,ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....