LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮರೆಯಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ.....

ಬೆಂಗಳೂರು -

ಕನ್ನಡ ಚಿತ್ರರಂಗದ ಹಿರಿಯ ನಟಿ ಬಹುಭಾಷಾ ತಾರೆ ಜಯಂತಿ ಅವರು ನಿಧನರಾಗಿದ್ದಾರೆ‌.ಹೌದು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲು ತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟಿ ಅಭಿನಯ ಶಾರದೆ ಜಯಂತಿ (76) ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಅಭಿಯನ ಶಾರದೆ ಜಯಂತಿ ಅವರು ಒಟ್ಟು ಆರು ಭಾಷೆಗಳಲ್ಲಿ 190 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ದ್ದಾರೆ. ವರನಟ ಡಾ. ರಾಜ್ ಕುಮಾರ್ ಜೊತೆಗೆ ಸುಮಾರು 45 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. 1968 ರಲ್ಲಿ ತೆರೆ ಕಂಡ ವೈ,ಅರ್,ಸ್ವಾಮಿ ನಿರ್ದೇಶ ನದ 'ಜೇನು ಗೂಡು'ಚಿತ್ರದ ಮೂಲಕ ಚಿತ್ರ ರಂಗ ಪ್ರವೇಶಿಸಿದ ಜಯಂತಿಯವರ ಮೂಲ ಹೆಸರು' ಕಮಲ ಕುಮಾರಿ.ಅದಕ್ಕಿಂತ ಮುನ್ನ 'ಜಗದೇಕ ವೀರನ ಕಥೆ 'ಚಿತ್ರದಲ್ಲಿ ಸಣ್ಣ ಪಾತ್ರ ವೊಂದರಲ್ಲಿ ಅಭಿನಯಿಸಿದ್ದಾರೆ.ಒಟ್ಟು ಆರು ಭಾಷೆಯ ಚಿತ್ರಗಳ ಲ್ಲಿ ಅಭಿನಯಿಸಿರುವ ಜಯಂತಿ ಕನ್ನಡದ 190 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ನಿರ್ಮಾಪಕಿಯೂ ನಿರ್ದೇಶಕಿಯೂ ಆಗಿರುವ ಇವರು 1965 'ಮಿಸ್ ಲೀಲಾವತಿ' ಚಿತ್ರದ ಅಭಿನ ಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ.'ಎರಡು ಮುಖ'. (1969),ಮನಸ್ಸಿನಂತೆ ಮಾಂಗಲ್ಯ'(1976),'ಧರ್ಮ ದಾರಿ ತಪ್ಪಿತು'(1981),ಮಸಣದ ಹೂವು (1985), 'ಆನಂದ್ '(1989) ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....