LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವಿನಯ ಕುಲಕರ್ಣಿ ಬಂಧನ ಅವಧಿ ಮುಕ್ತಾಯ - ಅರ್ಜಿ ವಿಚಾರಣೆ

ಧಾರವಾಡ -

ಜಿ.ಪಂ. ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಬಂಧನ ಅವಧಿ ಮುಗಿದ ಹಿನ್ನಲೆಯಲ್ಲಿ ಇಂದು ಧಾರವಾಡದ ಸಿಬಿಐ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಮಧ್ಯಾಹ್ನದ ಬಳಿಕ ವೀಡಿಯೋ ಕಾನ್ಪರೆನ್ಸ್ ಮೂಲಕ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ನ್ಯಾಯಾಧೀಶರು ವಿಚಾರಣೆ ಮಾಡಲಿದ್ದಾರೆ.

ಈಗಾಗಲೇ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರೋ ವಿನಯ ಕುಲಕರ್ಣಿ ಬಂಧನ ಅವಧಿ ಇಂದು ಮುಕ್ತಾಯವಾಗಲಿದೆ. ಹೀಗಾಗಿ ಮಧ್ಯಾಹ್ನದ ನಂತರ ನ್ಯಾಯಾಧೀಶರು ವಿಡಿಯೋ ಕಾನ್ಸರನ್ಸ್ ಮೂಲಕ ವಿಚಾರಣೆ ಮಾಡಲಿದ್ದಾರೆ. ಈ ನಡುವೆ ಬಹುತೇಕ ನ್ಯಾಯಾಂಗ ಬಂಧನ ಅವಧಿ ಮುಂದುವರೆಯಲಿದ್ದು ಸಿಬಿಐ ಅಧಿಕಾರಿಗಳು ಮತ್ತೇ ಇವರನ್ನು ವಿಚಾರಣೆಗೆ ಕೇಳಿದ್ರೆ ನ್ಯಾಯಾಧೀಶರು ಸಿಬಿಐ ಕಸ್ಟಡಿಗೆ ನೀಡಲಿದ್ದು ಕೇಳದಿದ್ದರೇ ಮತ್ತೇ ನ್ಯಾಯಾಂಗ ಬಂಧನದ ಅವಧಿ ಮುಂದುವರಿಯಲಿದೆ.ಇನ್ನೂ ಜಾಮೀನಿಗಾಗಿ ಈಗಾಗಲೇ ಅರ್ಜಿಯನ್ನು ಹಾಕಿದ್ದು ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 9 ಕ್ಕೇ ಮುಂದೂಡಲಾಗಿದೆ.ಇದರೊಂದಿಗೆ ಇದೇ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ,ಸೋದರ ಮಾವ ಸೋಮಶೇಖರ ಇಂಡಿ, ಹಾಗೇ ಸಚಿವರಾಗಿದ್ದ ಸಮಯದಲ್ಲಿ ಆಪ್ತರಾಗಿದ್ದ ಸೋಮು ನ್ಯಾಮಗೌಡ ಇವರಿಗೆ ಸಿಬಿಐ ಅಧಿಕಾರಿಗಳು ಸುಳ್ಳು ಪತ್ತೆ ಪರೀಕ್ಷೆ ಮಾಡಲು ಅನುಮತಿ ಕೇಳಿದ್ದು ಅದರ ವಿಚಾರಣೆ ಕೂಡಾ ಇಂದೇ ಬರಲಿದೆ.

ಈಗಾಗಲೇ ಈ ಒಂದು ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶರು ಮಾಡಿದ್ದು ಇಂದಿಗೆ ಮುಂದೂಡಿದ್ದು ಎರಡು ಪ್ರಕರಣಗಳ ತೀರ್ಪು ಏನಾಗಲಿದೆ ಎಂಬದರ ಮೇಲೆ ಎಲ್ಲರ ಚಿತ್ತ ಇದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....