LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಸಮುದಾಯಕ್ಕೆ ಮಾದರಿಯಾದ ಯಲ್ಲಪ್ಪ ಬಂಡಿ - ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಸಮಸ್ಯೆಗೆ ನೆರವಾದ ಮುಖ್ಯಶಿಕ್ಷಕ.....

ಅಳವಂಡಿ -

ಮುಖ್ಯಶಿಕ್ಷಕ ರೊಬ್ಬರು ಸರ್ಕಾರ ಶಾಲೆಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಲು ಮುಂದಾಗಿದ್ದಾರೆ ಹೌದು ಕೊಪ್ಪಳ ಜಿಲ್ಲೆಯ ಮುದುಕನಗೌಡ ಗಾಳಿ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಮುಖ್ಯ ಶಿಕ್ಷಕ ₹1 ಲಕ್ಷ ರೂಪಾಯಿ ದೇಣಿಗೆ ನೀಡಲು ಮುಂದಾಗಿದ್ದಾರೆ

ಕೊಪ್ಪಳ ತಾಲ್ಲೂಕಿನ ಅಳವಂಡಿ ಗ್ರಾಮದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ.ಇಲ್ಲಿನ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದು ರಾಗಿತ್ತು ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಬೇಕು ಎಂಬ ಉದ್ದೇಶದಿಂದ ಈ ಶಾಲೆಗೆ ನೂತನವಾಗಿ ಮುಖ್ಯಶಿಕ್ಷಕರಾಗಿ ಬಡ್ತಿ ಹೊಂದಿದ ಯಲ್ಲಪ್ಪ ಬಂಡಿ ಅವರು ತಮ್ಮ ತಂದೆಯ ಸ್ಮರಣಾರ್ಥ ಸುಮಾರು ₹1 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ನೀರಿನ ವ್ಯವಸ್ಥೆ ಮಾಡುವ ಮೂಲಕ ಶಿಕ್ಷಕರ ವರ್ಗಕ್ಕೆ ಮಾದರಿಯಾಗಿದ್ದಾರೆ.

ಯಲ್ಲಪ್ಪ ಬಂಡಿ ಅವರು ಕೊಪ್ಪಳ ತಾಲ್ಲೂಕಿನ ನೀರಲಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಂಗ್ಲ ಭಾಷೆಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದೆ ಮುಖ್ಯಶಿಕ್ಷಕರಾಗಿ ಬಡ್ತಿ ಹೊಂದಿ ಅಳವಂಡಿಯ ಸರ್ಕಾರಿ ಪ್ರೌಢಶಾಲೆಯನ್ನು ಆಯ್ಕೆ ಮಾಡಿಕೊಂಡು ಮುಖ್ಯ ಶಿಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಶಾಲೆಯಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುವ ವೇಳೆ ಈ ಘೋಷಣೆ ಮಾಡುವ ಮಾಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ದೇಣಿಗೆ ನೀಡಲು ಮುಂದಾಗಿದ್ದು ಎಲ್ಲ ಕಡೆ ಉತ್ತಮ ಪ್ರಶಂಸೆ ವ್ಯಕ್ತವಾಗಿದೆ.

ಸುದ್ದಿ ಸಂತೆ ನ್ಯೂಸ್ ಅಳವಂಡಿ....ಮ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ.....ಶೀಘ್ರದಲ್ಲೇ ಶಿಕ್ಷಕರಿಂದ ನಡೆಯಲಿದೆ.....ಶಾಲಾ ಗೇಟ್‌ಗೆ ಬೀಗ ಹಾಕಿ ಮಲಗಿದ ಮುಖ್ಯಶಿಕ್ಷಕ.....IPS ಅಧಿಕಾರಿಗಳ ವರ್ಗಾವಣೆ ರಾಜ್ಯದಲ್ಲಿ ಮುಂದುವರಿದ ವರ್ಗಾವಣೆ ಪ್ರಕ್ರಿಯೆ.....ಶಿಕ್ಷಕರ ಕಡ್ಡಾಯ ವರ್ಗಾವಣೆ ಗೆ ಆಗ್ರಹ ವರ್ಗಾವಣೆ ವಿಚಾರದಲ್ಲಿ ನಾಡಿನ ಶಿಕ್ಷಕರ ಆಕ್ರೋಶ.....ರಾಜ್ಯದ ಶಾಲೆಗಳ ಮಧ್ಯಂತರ ವರದಿ ಸಲ್ಲಿಸಿದ ವಿಶೇಷ ಸದನ ಸಮಿತಿ.....ವರದಿಯಲ್ಲಿ ಏನೇನಿದೆ ಗೊತ್ತಾ.....ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ.....ಶಿಕ್ಷಕ ಪ್ರಶಾಂತ ಪತ್ರ ವೈರಲ್.....ಶಿಕ್ಷಕ'ನೇ ಶ್ರೇಷ್ಠ ಸಮೀಕ್ಷಾ ವರದಿಯಲ್ಲಿ ಪತ್ತೆ.....ಶಿಕ್ಷಕರ ಕಾರ್ಯಕ್ಕೆ ಸಾಕ್ಷಿಯಾದ ವರದಿ.....ಸರ್ಕಾರಿ ಶಾಲೆಗೆ ಬಂತು ಹೊಸದೊಂದು ಕಾರ್ಯಕ್ರಮ ಶಿಕ್ಷಕರಿಗೆ ಮತ್ತೊಂದು ತಲೆನೋವು ಜವಾಬ್ದಾರಿ.....ಅಂತರ ಶಾಲಾ ಕ್ರೀಡಾಕೂಟ ಅವ್ಯವಸ್ಥೆಯ ಆಗರ ವಿದ್ಯಾರ್ಥಿಗಳ ಪರದಾಟ.....BEO ಕಚೇರಿಯಲ್ಲಿ ಶಿಕ್ಷಕರ ಸಂಘದ ಕಿತ್ತಾಟ ಆಗಿದ್ದಾದರೂ ಏನು.....